ಹಿಂದೂ ಹೆಸರು ಇಟ್ಟುಕೊಂಡು ಮತಾಂಧ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಶೋಷಣೆ

ರಾಜಧಾನಿ ದೆಹಲಿಯ ಪ್ರಕರಣ

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕೇಂದ್ರದ ವ್ಯಾಪ್ತಿಯಲ್ಲಿದೆ. ದೇಶದ ರಾಜಧಾನಿಯಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಜಿಹಾದ್ ವಿರೋಧಿ ಕಾನೂನನ್ನು ಇಲ್ಲಿಯೂ ಅಸ್ತಿತ್ವಕ್ಕೆ ತರಲು ಕೇಂದ್ರ ಸರಕಾರ ಪ್ರಯತ್ನ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !

ನವ ದೆಹಲಿ – ಹಿಂದೂ ಎಂದು ಹೇಳಿ ತನ್ನ ನಿಜವಾದ ಗುರುತನ್ನು ಮರೆಮಾಚಿ ೧೫ ವರ್ಷದ ಹಿಂದೂ ಬಾಲಕಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ, ಮದುವೆಯ ಭರವಸೆ ನೀಡಿ, ಆಕೆಯನ್ನು ಅಪಹರಿಸಿ ಲೈಂಗಿಕ ಕಿರುಕುಳ ಕೊಟ್ಟು ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ೧೮ ವರ್ಷದ ಶೋಯೆಬ್ ಖಾನ್ ಎಂಬವನನ್ನು ಬಂಧಿಸಿದ್ದಾರೆ. ಆತ ಆ ಹುಡುಗಿಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ್ದ.