ಶ್ರೀಮದ್ಭಾಗವತದ ಹನ್ನೊಂದನೆಯ ಸ್ಕಂದದಲ್ಲಿಯದು ಮತ್ತು ಅವಧೂತರ ಸಂವಾದವಿದೆ. ಇದರಲ್ಲಿ ಅವಧೂತರು ‘ತಾವು ಯಾವ ಗುರುಗಳನ್ನು ಮಾಡಿಕೊಂಡರು ಮತ್ತು ಅವರಿಂದ ಏನು ಕಲಿತರು, ಎನ್ನುವುದನ್ನು ಹೇಳಿದ್ದಾರೆ. ಅವಧೂತ ಹೇಳುತ್ತಾನೆ, ಜಗತ್ತಿನಲ್ಲಿರುವ ಪ್ರತಿಯೊಂದು ವಿಷಯವೂ ಗುರುವಾಗಿದೆ; ಏಕೆಂದರೆ ಪ್ರತಿಯೊಂದು ವಿಷಯದಿಂದಲೂ ಏನಾದರೊಂದು ಕಲಿಯಲು ಸಿಗುತ್ತದೆ. ಕೆಟ್ಟ ವಿಷಯಗಳಿಂದ ಯಾವ ದುರ್ಗುಣಗಳನ್ನು ಬಿಡಬೇಕು ಮತ್ತು ಒಳ್ಳೆಯ ವಿಷಯಗಳಿಂದ ಯಾವ ಸದ್ಗುಣಗಳನ್ನು ತೆಗೆದುಕೊಳ್ಳಬೇಕು ಎಂಬುದು ಕಲಿಯಲು ಸಿಗುತ್ತದೆ. ಉದಾಹರಣೆಗಾಗಿ ನಾನು ಮುಂದೆ ಕೊಟ್ಟಿರುವ ಇಪ್ಪತ್ನಾಲ್ಕು ಗುರುಗಳಿಂದ ಸ್ವಲ್ಪ-ಸ್ವಲ್ಪ ಜ್ಞಾನವನ್ನು ಪಡೆದು ಅವುಗಳಿಂದ ಸಮುದ್ರವನ್ನು ಮಾಡಿದೆ ಮತ್ತು ಅದರಲ್ಲಿ ಸ್ನಾನ ಮಾಡಿ ಎಲ್ಲ ಪಾಪಗಳ ಪರಿಮಾರ್ಜನೆಯನ್ನು ಮಾಡಿಕೊಂಡೆ.