ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕಾಂಗ್ರೆಸ್ ಮುಖಂಡರನ್ನು ಕೂಡಲೇ ಬಂಧಿಸಿ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಕಠಿಣ ಶಿಕ್ಷೆ ವಿಧಿಸಲು ರಾಜ್ಯದ ಬಿಜೆಪಿ ಸರಕಾರ ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಕೊಡಗು – ‘ಕೊಡವರೂ(ಕೊಡವ ಸಮುದಾಯ) ಗೋಮಾಂಸವನ್ನು ತಿನ್ನುತ್ತಾರೆ’ ಎಂದು ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧಪಕ್ಷದ ಹಾಲಿ ನಾಯಕ ಸಿದ್ದರಾಮಯ್ಯ ವಿರುದ್ಧ ಧಾರ್ಮಿಕ ಭಾವನೆಗಳನ್ನು ನೋಯಿಸಿದ ಪ್ರಕರಣದಲ್ಲಿ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಸಿಆರ್‌ಪಿಸಿ ಕಲಂ ೧೫೩ಅ (ಧಾರ್ಮಿಕ ಧ್ವೇಷವನ್ನು ಹಬ್ಬಿಸುವ) ಅನ್ವಯ ಅಪರಾಧ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಪಶ್ಚಿಮ ಘಟ್ಟಗಳ ರಕ್ಷಣಾ ಸಮಿತಿಯ ಅಧ್ಯಕ್ಷ ರವಿ ಕುಶಾಲಪ್ಪ ಇವರು ದೂರು ನೀಡಿದ್ದರು.
ಕೊಡುಗಿನವರು ಹಸುಗಳನ್ನು ಪೂಜಿಸುತ್ತಾರೆ, ಅದೇ ರೀತಿ ಕೊಡಗು ಪ್ರದೇಶದಲ್ಲಿ ಗೋಹತ್ಯೆ ಹಾಗೂ ಗೋಮಾಂಸ ಸೇವನೆಗೆ ನಿಷೇಧವಿದೆ. ಈ ನಿಯಮವು ಬ್ರಿಟಿಷರ ಕಾಲದಿಂದಲೂ ಇಲ್ಲಿ ಜಾರಿಯಲ್ಲಿದೆ. ಹೀಗಿರುವಾಗ ಸಿದ್ದರಾಮಯ್ಯ ಅವರ ಮೇಲಿನ ಹೇಳಿಕೆಯನ್ನು ನೀಡಿದ್ದರಿಂದ ಇಲ್ಲಿನ ನಾಗರಿಕರಲ್ಲಿ ಆಕ್ರೋಶವನ್ನು ಉಂಟುಮಾಡಿದೆ. ‘ಸಿದ್ದರಾಮಯ್ಯರವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ಸಾರ್ವಜನಿಕ ಕ್ಷಮೆಯಾಚಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಈ ಆರೋಪದ ಮೇಲೆ ಸ್ಪಷ್ಟೀಕರಣ ನೀಡುತ್ತಾ ಸಿದ್ದರಾಮಯ್ಯರವರು, ‘ಕೊಡವರು ಗೋಮಾಂಸ ತಿನ್ನುತ್ತಾರೆ’ ಎಂಬ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ನಿರೂಪಿಸಿವೆ. ಇದರಿಂದ ಕೊಡವ ಸಮುದಾಯದ ಭಾವನೆಗಳನ್ನು ನೋವಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ‘ನನ್ನ ನೆರೆಯ ಜಿಲ್ಲೆಯ ಕೊಡಗಿನ ಸಂಸ್ಕೃತಿಯ ಬಗ್ಗೆ ನನಗೆ ತಿಳಿದಿದೆ ಮತ್ತು ಹೆಮ್ಮೆಯೂ ಇದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಮಾಧಾನಗೊಳ್ಳದ ಕೊಡವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.