ಶಿವನ ದರ್ಶನದ ಮುನ್ನ ನಂದಿದರ್ಶನ ಪಡೆಯುವುದು
ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ ರಜ-ತಮ ಕಣಗಳ ವಿಘಟನೆಯಾಗಿ ವ್ಯಕ್ತಿಯ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಇದರಿಂದ ವ್ಯಕ್ತಿಗೆ ಶಿವಲಿಂಗದಿಂದ ಹೊರ ಬೀಳುವ ಶಕ್ತಿಶಾಲಿ ಲಹರಿಗಳನ್ನು ಸಹಿಸಲು ಸಾಧ್ಯವಾಗುತ್ತದೆ. ನಂದಿಯ ಕೊಂಬುಗಳಿಂದ ದರ್ಶನವನ್ನು ಪಡೆದುಕೊಳ್ಳದೇ ನೇರವಾಗಿ ಶಿವನ ದರ್ಶನವನ್ನು ಪಡೆದುಕೊಂಡರೆ ತೇಜಲಹರಿಗಳ ಆಘಾತದಿಂದ ಶರೀರದಲ್ಲಿ ಉಷ್ಣತೆ ನಿರ್ಮಾಣವಾಗುವುದು, ತಲೆ ಭಾರ, ಶರೀರ ಅಕಸ್ಮಾತ್ತಾಗಿ ಕಂಪಿಸುವುದು ಮುಂತಾದ ತೊಂದರೆಗಳಾಗಬಹುದು.
ಶೃಂಗದರ್ಶನದ ಯೋಗ್ಯ ಪದ್ಧತಿ
`ಶೃಂಗದರ್ಶನ’ ಎಂದರೆ ನಂದಿಯ ಕೊಂಬುಗಳ ಮೂಲಕ ಶಿವಲಿಂಗವನ್ನು ನೋಡುವುದು.
ವಾಮಹಸ್ತಿ ವೃಷಣ ಧರೋನಿ |
ತರ್ಜನಿ ಅಂಗುಷ್ಠ ಶೃಂಗೀ ಠೆವೋನಿ ||
– ಶ್ರೀಗುರುಚರಿತ್ರೆ
ಅರ್ಥ :
೧. ನಂದಿಯ ಬಲಬದಿಗೆ ಕುಳಿತು ಅಥವಾ ನಿಂತುಕೊಂಡು ಎಡಗೈಯನ್ನು ನಂದಿಯ ವೃಷಣದ ಮೇಲಿಡಬೇಕು.
೨. ಬಲಗೈಯ ತರ್ಜನಿ (ಹೆಬ್ಬೆರಳಿನ ಸಮೀಪದ ಬೆರಳು) ಮತ್ತು ಹೆಬ್ಬೆರಳನ್ನು ನಂದಿಯ ೨ ಕೊಂಬುಗಳ ಮೇಲಿಡಬೇಕು.
ಎರಡು ಕೊಂಬುಗಳು ಮತ್ತು ಅದರ ಮೇಲಿರಿಸಿದ ಎರಡು ಬೆರಳುಗಳ ನಡುವಿನ ಖಾಲಿ ಜಾಗದಿಂದ ಶಿವಲಿಂಗದ ದರ್ಶನವನ್ನು ಪಡೆದುಕೊಳ್ಳಬೇಕು.

ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಗದಗನಲ್ಲಿ ರಾಮಲಿಂಗೇಶ್ವರ ದೇವಸ್ಥಾನದೊಳಗೆ ನುಗ್ಗಿ ಶಿವಲಿಂಗ ಮತ್ತು ನಂದಿ ವಿಗ್ರಹದ ಧ್ವಂಸ ! – Miscreants Vandalized Shivling In Gadag
ಕರ್ನಾಟಕದ ದರ್ಗಾ ಆವರಣದಲ್ಲಿರುವ ಶಿವಲಿಂಗದ ಸ್ಥಳದಲ್ಲಿ ಮಹಾಶಿವರಾತ್ರಿ ಪೂಜೆಗೆ ಅನುಮತಿ ನೀಡಬಾರದು! – Laadle Mashak Dargah in Kalaburagi
ತ್ರಿಶೂಲದ ಉತ್ಪತ್ತಿ ಹೇಗೆ ಆಯಿತು ?
ಶಿವೋಪಾಸನೆ ಹೇಗೆ ಮಾಡುವುದು ?
ಶಿವನ ಬಗ್ಗೆ ಜ್ಞಾನವನ್ನು ಪಡೆದುಕೊಂಡು ಶಿವನ ಬಗ್ಗೆ ಶ್ರದ್ಧೆಯನ್ನು ಹೆಚ್ಚಿಸೋಣ !