ವಾಕ್ ಸ್ವಾತಂತ್ರ್ಯದಿಂದ ಇತರರ ಧಾರ್ಮಿಕ ಭಾವನೆಗಳನ್ನು ನೋಯಿಸುವಂತಿಲ್ಲ ! – ಅಲಾಹಾಬಾದ ಉಚ್ಚ ನ್ಯಾಯಾಲಯದ ಲಖನೌ ವಿಭಾಗೀಯಪೀಠ

ನ್ಯಾಯಾಲಯದ ಈ ಹೇಳಿಕೆಯು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ಮತ್ತು ರಕ್ಷಿಸುವವರಿಗೆ ಕಪಾಳಮೋಕ್ಷವಾಗಿದೆ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಸಂವಿಧಾನವು ವಾಕ್ ಸ್ವಾತಂತ್ರ್ಯವನ್ನು ನೀಡಿದ್ದರೂ, ಒಬ್ಬರು ಇತರ ಧರ್ಮಗಳ ವಿರುದ್ಧ ಮಾತನಾಡಬಹುದು ಮತ್ತು ಆ ಧರ್ಮಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಬಹುದು ಎಂದು ಅರ್ಥವಲ್ಲ ಎಂದು ಅಲಹಬಾದ ಉಚ್ಚ ನ್ಯಾಯಾಲಯದ ಲಖನೌ ವಿಭಾಗೀಯಪೀಠವು ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ ಮಹಮ್ಮದ ನದೀಮ್ ಈ ಕಾರ್ಯಕರ್ತನ ಮಧ್ಯಂತರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ನದೀಮ್ ಬರಾಬಂಕಿಯಲ್ಲಿ ಮಾಡಿದ ಭಾಷಣದಲ್ಲಿ, ಅಯೋಧ್ಯೆಯ ಶ್ರೀರಾಮಮಂದಿರದ ಭೂಮಿ ಪೂಜೆಯ ಬಗ್ಗೆ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಭಾಷಣ ಮಾಡಿದ್ದ. ಅದಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.