ಕಲಬುರ್ಗಿಯಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಸ್ಪತ್ರೆಗೆ ದಾಖಲಾಗಲು ಆಟೊದಲ್ಲಿ ಅಲೆದ ಮಹಿಳೆ!

ಇಂದು ಆಕ್ಸಿಜನ್‌ಗಾಗಿ ಅಲೆದಾಡಬೇಕಿದ್ದ ಜನರು ಮುಂಬರುವ ಅದಕ್ಕೂ ದೊಡ್ಡ ಆಪತ್ಕಾಲದಲ್ಲಿ ನೀರು, ಆಹಾರ ಇಂತಹ ಅಗತ್ಯ ವಸ್ತುಗಳಿಗಾಗಿ ಅಲೆಯಬೇಕಾದರೆ ಆಶ್ಚರ್ಯವೆನಿಸಲಾರದು

ಕಲಬುರ್ಗಿ: ಜಿಲ್ಲೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಗಳು ವಿವಿಧ ಆಸ್ಪತ್ರೆಗಳಿಗೆ ಅಲೆಯಬೇಕಾಗುತ್ತಿದೆ. ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದರು. ‘ಐಸಿಯು ಹಾಸಿಗೆ ಖಾಲಿ ಇಲ್ಲ’ ಎಂದು ಹೇಳಿ ಆಸ್ಪತ್ರೆಯವರು ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಿದರು.

‘ಐಸಿಯು ಹಾಸಿಗೆಗಾಗಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಟೊದಲ್ಲಿ ನಾಲ್ಕು ಖಾಸಗಿ ಆಸ್ಪತ್ರೆಗಳು ಮತ್ತು ಇಎಸ್‌ಐ ಆಸ್ಪತ್ರೆಗೆ ಅಲೆದು ಜಿಮ್ಸ್ ಆಸ್ಪತ್ರೆಗೆ ಹೋದರು. ಆದರೆ, ಎಲ್ಲಿಯೂ ಹಾಸಿಗೆ ಸೌಲಭ್ಯ ಸಿಗಲಿಲ್ಲ, ಮೂರು ಗಂಟೆಯವರೆಗೆ ಆಸ್ಪತ್ರೆ ಹೊರಗಡೆಯೇ ಉಳಿಯಬೇಕಾಯಿತು. ಮಧ್ಯಾಹ್ನದ ವೇಳೆಗೆ ಜಿಮ್ಸ್ ಆಸ್ಪತ್ರೆಯವರೇ ಐಸಿಯು ಘಟಕದಲ್ಲಿ ಮತ್ತೊಂದು ಹಾಸಿಗೆ ವ್ಯವಸ್ಥೆ ಮಾಡಿ, ಒಂದೇ ಯಂತ್ರಕ್ಕೆ ಎರಡು ‘ಫ್ಲೋ ಮೀಟರ್’ ಅಳವಡಿಸಿ ಚಿಕಿತ್ಸೆ ನೀಡಿದರು.