ಚುನಾವಣಾ ಆಯೋಗಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಕಪಾಳಮೋಕ್ಷ !
ನವ ದೆಹಲಿ – ವಿಚಾರಣೆಯ ವೇಳೆ ನ್ಯಾಯಾಲಯ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಮಾಧ್ಯಮಗಳು ವಾರ್ತೆಗಳನ್ನು ಮಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸರ್ವೋಚ್ಚ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ಕಪಾಳಮೋಕ್ಷ ಮಾಡಿದೆ. ಮದ್ರಾಸ ಉಚ್ಚ ನ್ಯಾಯಾಲಯವು ಕೇಂದ್ರ ಚಿನಾವಣಾ ಆಯೋಗಕ್ಕೆ ಚಿನಾವಣೆಯ ಸಮಯದಲ್ಲಿ ರಾಜಕೀಯ ಸಭೆಗಳಲ್ಲಿ ಮತ್ತು ಪ್ರಚಾರ ಮಾಡುವಾಗ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಛಿಮಾರಿ ಹಾಕಿತ್ತು. ‘ಚುನಾವಣಾ ಆಯೋಗದ ಮೇಲೆ ಕೊಲೆ ಪ್ರಕರಣವನ್ನು ದಾಖಲಿಸಬೇಕು’ ಎಂದು ಹೇಳಿತ್ತು. ನ್ಯಾಯಾಲಯದ ಅಭಿಪ್ರಾಯವನ್ನು ಮಾಧ್ಯಮಗಳು ಪ್ರಕಟಿಸಿದ ನಂತರ ಕೇಂದ್ರ ಚುನಾವಣಾ ಆಯೋಗವು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಅದರ ಬಗ್ಗೆ ವಿಚಾರಣೆಯ ಸಮಯದಲ್ಲಿ ಈ ಮೇಲಿನ ಮಾತುಗಳಲ್ಲಿ ಮಾಧ್ಯಮವನ್ನು ನಿರ್ಬಂಧಿಸಲು ನ್ಯಾಯಾಲಯ ನಿರಾಕರಿಸಿತು.
ಚುನಾವಣಾ ಆಯೋಗದ ಪರವಾಗಿ ಮಾತನಾಡಿದ ವಕೀಲ ರಾಕೇಶ ದ್ವಿವೇದಿ, “ನ್ಯಾಯಾಲಯವು ಮೌಖಿಕವಾಗಿ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಪ್ರಕಟಿಸುವುದನ್ನು ಮಾಧ್ಯಮಗಳು ನಿಲ್ಲಿಸಬೇಕು. ಅದೇರೀತಿ ನ್ಯಾಯಾಲಯದ ಮೌಖಿಕ ಅಭಿಪ್ರಾಯದ ಆಧಾರದ ಮೇಲೆ ಕ್ರಿಮಿನಲ್ ದೂರು ದಾಖಲಿಸಲು ಸಾಧ್ಯವಿಲ್ಲ.” ಇದಕ್ಕೆ ನ್ಯಾಯಾಲಯವು ನ್ಯಾಯಾಲಯದಲ್ಲಿ ಚರ್ಚೆಯ ವಾರ್ತೆಯನ್ನು ಮಾಡದಂತೆ ಮಾಧ್ಯಮಗಳಿಗೆ ಹೇಳಲು ಸಾಧ್ಯವಿಲ್ಲ. ಅಂತಿಮ ಆದೇಶದಂತೆ ನ್ಯಾಯಾಲಯದಲ್ಲಿ ಯಾವುದು ಚರ್ಚೆಗಳಾಗುತ್ತದೆ, ಅದು ಜನರ ಹಿತದ ದೃಷ್ಠಿಯಿಂದ ಇರುತ್ತದೆ. ನ್ಯಾಯಾಲಯದಲ್ಲಿನ ವಕೀಲರು ಮತ್ತು ನ್ಯಾಯಾಧೀಶರ ನಡುವಿನ ಸಂವಾದವಾಗಿದೆ. ಈ ಪ್ರಕ್ರಿಯೆಯ ಪಾವಿತ್ರ್ಯವನ್ನು ರಕ್ಷಿಸುವಲ್ಲಿ ಮಾಧ್ಯಮವು ಪ್ರಬಲ ಕಾವಲುಗಾರವಾಗಿದೆ.” ಎಂದು ಹೇಳಿದೆ.