‘ಯುಗಾದಿಯ ಶುಭಮುಹೂರ್ತದಂದು ಊಳಿದ ಹೊಲದ ಸಾಗುವಳಿಯ ಕೆಲಸವನ್ನು ಅಕ್ಷಯ ತದಿಗೆಯ ಒಳಗೆ ಪೂರ್ಣಗೊಳಿಸಬೇಕು. ಅಕ್ಷಯ ತದಿಗೆಯಂದು ಸಾಗುವಳಿ ಮಾಡಿದ ಜಮೀನಿನಲ್ಲಿರುವ ಮಣ್ಣನ್ನು ಕೃತಜ್ಞತೆಯ ಭಾವದಿಂದ ಪೂಜಿಸಬೇಕು. ಅನಂತರ ಪೂಜಿಸಿದ ಮಣ್ಣಿನಲ್ಲಿ ಹೊಂಡಗಳನ್ನು ಮಾಡಬೇಕು ಮತ್ತು ಆ ಹೊಂಡಗಳಲ್ಲಿ ಬೀಜಗಳನ್ನು ಬಿತ್ತಬೇಕು. ಅಕ್ಷಯ ತದಿಗೆಯ ಮುಹೂರ್ತದಲ್ಲಿ ಬೀಜಗಳನ್ನು ಬಿತ್ತಲು ಪ್ರಾರಂಭಿಸಿದರೆ ಆ ದಿನ ವಾತಾವರಣದಲ್ಲಿ ಕಾರ್ಯನಿರತವಾಗಿರುವ ದೈವೀ ಶಕ್ತಿಯು ಬೀಜಗಳಲ್ಲಿ ಬರುವುದರಿಂದ ಸಮೃದ್ಧವಾದ ಫಸಲು ಬರುತ್ತದೆ. ಇದೇ ರೀತಿಯಲ್ಲಿ ಅಕ್ಷಯ ತದಿಗೆಯಂದು ಹೊಂಡಗಳನ್ನು ಮಾಡಿ ಗಿಡಗಳನ್ನು ನೆಟ್ಟರೆ ಹಣ್ಣಿನ ತೋಟವೂ ಹೇರಳವಾದ ಉತ್ಪಾದನೆಯನ್ನು ನೀಡುತ್ತದೆ.