ಅಕ್ಷಯ ತದಿಗೆಯ ದಿನ ಎಳ್ಳು ತರ್ಪಣೆಯನ್ನು ಏಕೆ ಮಾಡುತ್ತಾರೆ ?

ಪೂರ್ವಜರಿಗೆ ಗತಿ ಸಿಗುವುದರ ಮಹತ್ವ: ಅಕ್ಷಯ ತದಿಗೆಯ ದಿನ ಉಚ್ಚಲೋಕದಿಂದ ಸಾತ್ತ್ವಿಕತೆಯು ಬರುತ್ತಿರುತ್ತದೆ. ಈ ಸಾತ್ತ್ವಿಕತೆಯನ್ನು ಗ್ರಹಣ ಮಾಡಲು ಭುವರ್ಲೋಕದ ಅನೇಕ ಜೀವಗಳು (ಲಿಂಗದೇಹಗಳು) ಪೃಥ್ವಿಯ ಸಮೀಪಕ್ಕೆ ಬರುತ್ತವೆ. ಭುವರ್ಲೋಕದಲ್ಲಿರುವ ಬಹುತೇಕ ಜೀವಗಳು ಮನುಷ್ಯರ ಪೂರ್ವಜರಾಗಿರುತ್ತಾರೆ ಮತ್ತು ಅವರು ಪೃಥ್ವಿಯ ಸಮೀಪ ಬರುವುದರಿಂದ ಮನುಷ್ಯರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಪೂರ್ವಜರ ಋಣವೂ ಮನುಷ್ಯರ ಮೇಲೆ ಬಹಳಷ್ಟು ಇರುತ್ತದೆ. ಈ ಋಣವನ್ನು ತೀರಿಸಲು ಮನುಷ್ಯನು ಪ್ರಯತ್ನಿಸುವುದು ಈಶ್ವರನಿಗೆ ಅಪೇಕ್ಷಿತವಾಗಿದೆ. ಪೂರ್ವಜರಿಗೆ ಗತಿ ಸಿಗಬೇಕೆಂದು ಅಕ್ಷಯ ತದಿಗೆಯಂದು ಎಳ್ಳು ತರ್ಪಣೆಯನ್ನು ಮಾಡುತ್ತಾರೆ.

ಎಳ್ಳು ತರ್ಪಣೆ ಮಾಡುವ ಪದ್ಧತಿ

ಒಂದು ತಟ್ಟೆಯಲ್ಲಿ ಶ್ರೀವಿಷ್ಣು, ಬ್ರಹ್ಮ ಅಥವಾ ದತ್ತನ ಆವಾಹನೆಯನ್ನು ಮಾಡಬೇಕು. ಆಮೇಲೆ ದೇವತೆಗಳು ಸೂಕ್ಷ್ಮದಲ್ಲಿ ಆ ತಟ್ಟೆಯಲ್ಲಿ ಬಂದಿದ್ದಾರೆಂದು ಭಾವವನ್ನಿಟ್ಟು ಕೈಯಲ್ಲಿ ಎಳ್ಳನ್ನು ತೆಗೆದುಕೊಂಡು ಅವರ ಚರಣಗಳ ಮೇಲೆ ಅರ್ಪಿಸಬೇಕು. ಇನ್ನೊಂದು ತಟ್ಟೆಯನ್ನು ತೆಗೆದುಕೊಂಡು ನಮ್ಮ ಪೂರ್ವಜರ ಆವಾಹನೆಯನ್ನು ಮಾಡಬೇಕು. ಆಮೇಲೆ ಪೂರ್ವಜರು ತಟ್ಟೆಯಲ್ಲಿ ಬಂದಿದ್ದಾರೆಂದು ಭಾವವನ್ನಿಟ್ಟು ದೇವತೆಗಳ ತತ್ತ್ವದಿಂದ ಭರಿತವಾದ ಎಳ್ಳನ್ನು ಅವರಿಗೆ ಅರ್ಪಿಸಬೇಕು, ಅಂದರೆ ಸಾತ್ತ್ವಿಕವಾಗಿರುವ ಈ ಎಳ್ಳನ್ನು ಕೈಯಲ್ಲಿ ತೆಗೆದುಕೊಂಡು ಅದರ ಮೇಲಿನಿಂದ ತಟ್ಟೆಯಲ್ಲಿ ನಿಧಾನವಾಗಿ ನೀರನ್ನು ಬಿಡಬೇಕು ಮತ್ತು ಆ ಸಮಯದಲ್ಲಿ ಬ್ರಹ್ಮ, ಶ್ರೀವಿಷ್ಣು ಅಥವಾ ಇವರಿಬ್ಬರ ಅಂಶವಿರುವ ದತ್ತನಿಗೆ ಪೂರ್ವಜರಿಗೆ ಗತಿ ನೀಡಿ ಎಂದು ಪ್ರಾರ್ಥನೆಯನ್ನು ಮಾಡಬೇಕು. – ಈಶ್ವರ (ಕು.ಮಧುರಾ ಭೋಸಲೆಯವರ ಮಾಧ್ಯಮದಿಂದ, ೧೦.೫. ೨೦೦೫)

ಆಪದ್ಧರ್ಮ : ಪಿತೃಗಳಿಗೆ ಪ್ರಾರ್ಥನೆಯನ್ನು ಮಾಡಿ ಮನೆಯಿಂದಲೇ ಪಿತೃತರ್ಪಣೆಯನ್ನು ಮಾಡಬಹುದು.

ಆಪದ್ಧರ್ಮ : ಕುಲಾಚಾರ ಧಾರ್ಮಿಕ ಕೃತಿ –  ಈ ಮೇಲಿನ ಕೃತಿಗಳನ್ನು ಹೊರತು ಪಡಿಸಿ ಕುಲಕ್ಕನುಸಾರ ಅಕ್ಷಯ ತದಿಗೆಯಂದು ನಾವು ಇತರ ಧಾರ್ಮಿಕ ಕೃತಿಗಳನ್ನು ಮಾಡುತ್ತಿದ್ದಲ್ಲಿ, ಅದು ಸರಕಾರದ ಸದ್ಯದ ನಿಯಮಕ್ಕನು ಗುಣವಾಗಿ ಆಗುತ್ತಿದ್ದಲ್ಲಿ ಮಾತ್ರ ಮಾಡಬೇಕು.