ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ ?

ದಾನ ಮಾಡುವುದರಿಂದ ಪುಣ್ಯವು ಸಿಗುತ್ತದೆ. ಅಕ್ಷಯ ತದಿಗೆಯ ದಿನ ಮಾಡಿದ ದಾನವು ಯಾವಾಗಲೂ ಕ್ಷಯವಾಗುವುದಿಲ್ಲ. ಅಕ್ಷಯ ತದಿಗೆಯ ದಿನ ಮಾಡಿದ ದಾನದಿಂದ ಬಹಳಷ್ಟು ಪುಣ್ಯ ಸಿಗುತ್ತದೆ. ಬಹಳಷ್ಟು ಪುಣ್ಯವು ಲಭಿಸುವುದರಿಂದ ವ್ಯಕ್ತಿಯ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಯಾವುದಾದರೊಂದು ಜೀವದ ಹಿಂದಿನ ಕರ್ಮಗಳು ಒಳ್ಳೆಯದಾಗಿದ್ದರೆ ಅವನ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಇದರಿಂದ ಅವನಿಗೆ ಸ್ವರ್ಗ ಪ್ರಾಪ್ತಿಯಾಗಬಹುದು. ಸಾಧಕರಿಗೆ ಪುಣ್ಯವನ್ನು ಪ್ರಾಪ್ತಿ ಮಾಡಿಕೊಂಡು ಸ್ವರ್ಗಪ್ರಾಪ್ತಿಯ ಧ್ಯೇಯವಿರುವುದಿಲ್ಲ, ಸಾಧಕರಿಗೆ ಈಶ್ವರಪ್ರಾಪ್ತಿಯ ಧ್ಯೇಯ ಪೂರ್ಣ ಮಾಡಲಿಕ್ಕಿರುತ್ತದೆ. ಆದುದರಿಂದ ಸಾಧಕರು ಸತ್ಪಾತ್ರರಿಗೆ ದಾನ ಮಾಡಬೇಕು.

ಎಲ್ಲಿ ಅಧ್ಯಾತ್ಮದ ಪ್ರಸಾರದ ಜೊತೆಗೆ ರಾಷ್ಟ್ರ ಮತ್ತು ಧರ್ಮಗಳಿಗಾಗಿ ಕಾರ್ಯ ಮಾಡಲಾಗುತ್ತದೆಯೋ, ಇಂತಹ ಸತ್‌ಕಾರ್ಯಗಳಿಗೆ ದಾನ ಮಾಡುವುದೆಂದರೆ ಸತ್ಪಾತ್ರೇ ದಾನವಾಗಿದೆ. ಸತ್ಪಾತ್ರರಿಗೆ ದಾನ ಮಾಡುವುದರಿಂದ ದಾನ ಮಾಡುವವನಿಗೆ ಪುಣ್ಯವು ಅನ್ವಯವಾಗದೇ ದಾನದ ಕರ್ಮವು ಅಕರ್ಮಕರ್ಮವಾಗುತ್ತದೆ. ಇದರಿಂದ ಅವನ ಆಧ್ಯಾತ್ಮಿಕ ಉನ್ನತಿಯಾಗುತ್ತದೆ. ಆಧ್ಯಾತ್ಮಿಕ ಉನ್ನತಿಯಾಗುವುದರಿಂದ ಸಾಧಕನು ಸ್ವರ್ಗಲೋಕಕ್ಕೆ ಹೋಗದೆ ಉಚ್ಚಲೋಕಕ್ಕೆ ಹೋಗುತ್ತಾನೆ. – ಈಶ್ವರ (ಕು.ಮಧುರಾ ಭೋಸಲೆಯವರ ಮಾಧ್ಯಮದಿಂದ, ೧೧.೫.೨೦೦೫)

ಆಪದ್ಧರ್ಮ : ಸತ್ಪಾತ್ರೇ ದಾನ – ಪ್ರಸ್ತುತ ವಿವಿಧ ಆನ್‌ಲೈನ್ ಸೌಲಭ್ಯಗಳು ಲಭ್ಯವಿದೆ. ಅದ್ದರಿಂದ ಅಧ್ಯಾತ್ಮಪ್ರಸಾರ ಮಾಡುವ ಸಂತರು ಅಥವಾ ಇಂತಹ ಸಂಸ್ಥೆಗಳಿಗೆ ನಾವು ಮನೆಯಿಂದಲೇ ಆನ್‌ಲೈನ್ ಮೂಲಕ ಅರ್ಪಣೆ ನೀಡಬಹುದು.

ಆಪದ್ಧರ್ಮ : ಉದಕುಂಭದ ದಾನ – ಅಕ್ಷಯ ತದಿಗೆಯ ದಿನ ಉದಕುಂಭ ದಾನವನ್ನು ಮಾಡಬೇಕು, ಎಂದು ಶಾಸ್ತ್ರವಿದೆ. ಈ ದಿನದಂದು ಈ ದಾನವನ್ನು ಮಾಡಲು ಹೊರಗೆ ಹೋಗಲು ಸಾಧ್ಯವಿಲ್ಲದ್ದರಿಂದ ಅಕ್ಷಯ ತದಿಗೆಯ ದಿನವೇ ದಾನದ ಸಂಕಲ್ಪವನ್ನು ಮಾಡಬೇಕು ಮತ್ತು ಸರಕಾರದ ನಿಯಮಕ್ಕನುಸಾರ ಯಾವಾಗ ಹೊರಗೆ ಹೋಗಲು ಸಾಧ್ಯವಾಗುವುದೋ, ಆಗಲೇ ದಾನವನ್ನು ಮಾಡಬೇಕು.

ಸತ್ಪಾತ್ರೆ ದಾನ ಮಾಡಲು ಇಲ್ಲಿ ಕ್ಲಿಕ್ ಮಾಡಿ : https://www.sanatan.org/en/donate