ಅಕ್ಷಯ ತದಿಗೆಯ ಮಹತ್ವ ಹಾಗೂ ಅದನ್ನು ಆಚರಿಸುವ ಪದ್ಧತಿ

ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತದಿಗೆಯಂದು (ವೈಶಾಖ ಶುಕ್ಲ ತದಿಗೆ) ಎಳ್ಳು ತರ್ಪಣೆ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ, ಹಾಗೂ ದಾನ ನೀಡುವ ಪರಂಪರೆಯಿದೆ. ಅಕ್ಷಯ ತದಿಗೆಯು ಈ ವರ್ಷ ಮೇ ೧೪ ರಂದು ಇದೆ. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು. ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಅದನ್ನು ‘ಆಪದ್ಧರ್ಮ’ ಎಂದು ಹೇಳುತ್ತಾರೆ. ಆಪದ್ಧರ್ಮ ಅಂದರೆ ‘ಆಪದಿ ಕರ್ತವ್ಯೋ ಧರ್ಮಃ |’ ಅಂದರೆ ‘ವಿಪತ್ತಿನಲ್ಲಿ ಆಚರಣೆಯಲ್ಲಿ ತರುವಂತಹ ಧರ್ಮ’. ಸದ್ಯ ಕೊರೋನಾದ ಹಾವಳಿಯಿಂದ ದೇಶದಾದ್ಯಂತ ಕೆಲವು ನಿಬಂಧನೆಗಳಿವೆ. ಈ ಕಾಲದಲ್ಲಿಯೇ ಅಕ್ಷಯ ತದಿಗೆ ಬರುತ್ತಿರುವುದರಿಂದ ಸಂಪತ್ಕಾಲದಲ್ಲಿ ಹೇಳಿದಂತೆ ಕೆಲವು ಧಾರ್ಮಿಕ ಕೃತಿಗಳು ಈ ಸಮಯದಲ್ಲಿ ಮಾಡಲು ಆಗುವುದಿಲ್ಲ. ಈ ದೃಷ್ಟಿಯಿಂದ ಪ್ರಸ್ತುತ ಲೇಖನದಲ್ಲಿ ಸದ್ಯದ ದೃಷ್ಟಿಯಿಂದ ಧರ್ಮಾಚರಣೆ ಎಂದು ಏನೆಲ್ಲ ಮಾಡಬಹುದು, ಎಂಬುದರ ಬಗ್ಗೆ https://sanatanprabhat.org/kannada/42709.html ಮತ್ತು https://sanatanprabhat.org/kannada/42706.html  ರಲ್ಲಿ ನೀಡಲಾಗಿದೆ. ಇಲ್ಲಿ ಮಹತ್ವದ ಅಂಶವೆಂದರೆ, ಹಿಂದೂ ಧರ್ಮವು ಮನುಷ್ಯನ ಬಗ್ಗೆ ಎಷ್ಟು ಆಳವಾದ ವಿಚಾರ ಮಾಡಿದೆ, ಎಂಬುದು ಕಲಿಯಲು ಸಿಗುತ್ತದೆ. ಇದರಿಂದ ಹಿಂದೂ ಧರ್ಮವೊಂದೇ ಅದ್ವಿತೀಯವಾಗಿದೆ ಎಂದು ತಿಳಿಯುತ್ತದೆ.

ಅಕ್ಷಯ ತದಿಗೆಯ ಮಹತ್ವ

ಅಸ್ಯಾಂ ತಿಥೌ ಕ್ಷಯಮುರ್ಪತಿ ಹುತಂ ನ ದತ್ತಂ|

ತೇನಾಕ್ಷಯೇತಿ ಕಥಿತಾ ಮುನಿಭಿಸ್ತ ತೀಯಾ|

ಉದ್ದಿಶ್ಯ ದೈವತಪಿತೃನ್ಕ್ರಿಯತೇ ಮನುಷ್ಯೈಃ|

ತತ್ ಚ ಅಕ್ಷಯಂ ಭವತಿ ಭಾರತ ಸರ್ವಮೇವ||

– ಮದನರತ್ನ

ಅರ್ಥ : (ಶ್ರೀಕೃಷ್ಣನು ಹೇಳುತ್ತಾನೆ) ಎಲೈ ಯುಧಿಷ್ಠಿರನೇ, ಈ ತಿಥಿಯಂದು ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ; ಹಾಗಾಗಿ ಋಷಿಗಳು ಇದನ್ನು ‘ಅಕ್ಷಯ ತೃತೀಯಾ’ ಎಂದಿದ್ದಾರೆ. ಈ ತಿಥಿಯಂದು ದೇವರು ಮತ್ತು ಪಿತೃಗಳನ್ನುದ್ದೇಶಿಸಿ ಮಾಡಿದ ಕೃತಿಯು ಅಕ್ಷಯ (ಅವಿನಾಶೀ)ವಾಗುತ್ತದೆ. ಅಕ್ಷಯ ತದಿಗೆಯಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ; ಹಾಗಾಗಿ ಈ ತಿಥಿಗೆ ಧಾರ್ಮಿಕ ಕೃತಿ ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಗೆ ಬರುತ್ತವೆ. ಇದರಿಂದ ಪೃಥ್ವಿಯ ಸಾತ್ತ್ವಿಕತೆ ಹೆಚ್ಚಾಗುತ್ತದೆ. ಹಾಗಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯ ಮಾಡಿದರೆ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. (ಆಧಾರ : ಸನಾತನ  ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ)

ಹಬ್ಬವನ್ನು ಆಚರಿಸುವ ಪದ್ಧತಿ

೧. ಸ್ನಾನದಾನಾದಿ ಧರ್ಮಕಾರ್ಯಗಳು : ಕಾಲ ವಿಭಾಗದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ. ಈ ದಿನ ಅಪಿಂಡಕ ಶ್ರಾದ್ಧವನ್ನು ಮಾಡಬೇಕು, ಅದು ಸಾಧ್ಯವಿಲ್ಲದಿದ್ದರೆ ಕಡಿಮೆಪಕ್ಷ ಎಳ್ಳಿನ ತರ್ಪಣವನ್ನಾದರೂ ನೀಡಬೇಕು. ದಾನವು ‘ಸತ್ಪಾತ್ರೇ ದಾನ’ವಾಗಿರಬೇಕು. ಸಂತರಿಗೆ ಅಥವಾ ಧರ್ಮಪ್ರಸಾರ ಮಾಡುವ ಆಧ್ಯಾತ್ಮಿಕ ಸಂಸ್ಥೆಗಳಿಗೆ ಮಾಡಿದ ದಾನವು ‘ಸತ್ಪಾತ್ರೇದಾನ’ವಾಗಿದೆ.

೨. ಆಪದ್ಧರ್ಮ – ಕೊರೋನಾದ ಸೋಂಕಿನಿಂದ ಪ್ರಸ್ತುತ ನಾವು ಮನೆಯಿಂದ ಹೊರಗೆ ಹೋಗಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಆಪದ್ಧರ್ಮದ ಭಾಗವೆಂದು ಮುಂದಿನ ಕೃತಿಗಳನ್ನು ಮಾಡಬಹುದು : ನಾವು ಮನೆಯಲ್ಲೇ ಗಂಗೆಯ ಸ್ಮರಣೆಯನ್ನು ಮಾಡಿ ಸ್ನಾನ ಮಾಡಿದರೆ ನಮಗೆ ಗಂಗಾ ಸ್ನಾನದ ಲಾಭವು ಸಿಗುತ್ತದೆ. ಅದಕ್ಕಾಗಿ ಈ ಮುಂದಿನ ಶ್ಲೋಕವನ್ನು ಹೇಳಿ ಸ್ನಾನವನ್ನು ಮಾಡಬೇಕು. ಗಂಗೇ ಚ ಯಮುನೆ ಚೈವ ಗೋದಾವರೀ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು. – ನಾರದಪುರಾಣ, ಪೂರ್ವಭಾಗ, ಪಾದ ೧, ಅಧ್ಯಾಯ ೨೭, ಶ್ಲೋಕ ೩೩