ರಾಜೀವ್ ಗಾಂಧಿಯನ್ನು ಹತ್ಯೆಗೈದು ಶಿಕ್ಷೆ ಅನುಭವಿಸುತ್ತಿರುವ ೭ ಮಂದಿಗೆ ಕ್ಷಮೆ ನೀಡಬೇಕು !

ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್

ಈ ಬಗ್ಗೆ ತಥಾಕಥಿತ ಪ್ರಗತಿ(ಅಧೋಗತಿ)ಪರರು ಮತ್ತು ಜಾತ್ಯತೀತವಾದಿಗಳು ಏಕೆ ಮಾತನಾಡುವುದಿಲ್ಲ ?

ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಚುನಾವಣೆಯಲ್ಲಿ ಆಯ್ಕೆಯಾದ ದ್ರಮುಕ ಪಕ್ಷದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರು ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಏಳು ಅಪರಾಧಿಗಳಿಗೆ ಕ್ಷಮೆ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ‘ಈ ಅಪರಾಧಿಗಳು ಕಳೆದ ಮೂರು ದಶಕಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರು ಮಾಡಿದ ಅಪರಾಧಕ್ಕೆ ಭಾರಿ ಬೆಲೆ ತೆತ್ತಿದ್ದಾರೆ. ಆದ್ದರಿಂದ ಅವರ ಶಿಕ್ಷೆಯನ್ನು ರದ್ದುಗೊಳಿಸಬೇಕು’ ಎಂದು ಮುಖ್ಯಮಂತ್ರಿ ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ. ಎಸ್. ನಳಿನಿ, ಸಂಥನ್, ಮುರುಗನ್, ಎ.ಜಿ. ಪೆರಾರಿವಲನ್, ಜಯಕುಮಾರ್, ರಾಬರ್ಟ್ ಪಯಾಸ್ ಮತ್ತು ಪಿ. ರವಿಚಂದ್ರನ್ ಎಂಬ ಏಳು ಆರೋಪಿಗಳಿದ್ದಾರೆ. ಇವರಲ್ಲಿ ನಳಿನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು; ಆದರೆ, ಸಂವಿಧಾನದ ೧೬೧ ನೇ ವಿಧಿ ಪ್ರಕಾರ ಇದನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಲಾಗಿತ್ತು. ಉಳಿದ ಮೂವರನ್ನು ಸಹ ಗಲ್ಲಿಗೇರಿಸುವುದನ್ನು ರದ್ದುಗೊಳಿಸಿ ಜೀವಾವಧಿ ಶಿಕ್ಷೆ ನೀಡಲಾಯಿತು.