ಪ್ರಯಾಗರಾಜನಲ್ಲಿ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಬಳಿ ಕೋಟ್ಯಂತರ ರೂಪಾಯಿ ಆಸ್ತಿ ಇದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತನ ಆರೋಪ

‘ಈ ಆರೋಪದ ಪ್ರಕಾರ, ಪೊಲೀಸ್ ಕಾನ್‌ಸ್ಟೆಬಲ್ ಬಳಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಇದ್ದರೆ, ಆತ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಏಕೆ ಕೆಲಸ ಮಾಡುವನು?’ ಎಂಬ ಪ್ರಶ್ನೆಯು ಉದ್ಭವಿಸುತ್ತದೆ, ಆದ್ದರಿಂದ ಹಿರಿಯ ಪೊಲೀಸರು ಇದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು !

ಪ್ರಯಾಗರಾಜ (ಉತ್ತರ ಪ್ರದೇಶ) – ಪ್ರಯಾಗರಾಜ ಜಿಲ್ಲೆಯ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಬಳಿ ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಆತನ ಬಳಿ ದುಬಾರಿ ಕಾರುಗಳು ಮತ್ತು ಫ್ಲ್ಯಾಟ್‌ಗಳು, ಜೊತೆಗೆ ಭೂಮಿಯೂ ಇದೆ. ಈ ಬಗ್ಗೆ ತನಿಖೆ ನಡೆಸಬೇಕು, ಎಂದು ಆರ್‌ಟಿಐ ಕಾರ್ಯಕರ್ತ ನೂತನ ಠಾಕೂರ ಅವರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕಳುಹಿಸಿ ಒತ್ತಾಯಿಸಿದ್ದಾರೆ.