ಬೆಂಗಳೂರಿನ ಗಲಭೆಕೋರರಿಗೆ ಕರ್ನಾಟಕ ಉಚ್ಚನ್ಯಾಯಾಲಯದಿಂದ ಜಾಮೀನು

ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸುವಲ್ಲಿ ವಿಳಂಬ ಮಾಡಿದಕ್ಕೆ ಜಾಮೀನು !

ಚಾರ್ಜ್‍ಶೀಟ್‍ಗಳನ್ನು ಸಲ್ಲಿಸಲು ತಡ ಮಾಡಿದವರ ವಿರುದ್ಧ ರಾಜ್ಯದ ಬಿಜೆಪಿ ಸರಕಾರವು ಕ್ರಮ ಕೈಗೊಳ್ಳಬೇಕು !

ಬೆಂಗಳೂರು – ಕಳೆದ ವರ್ಷ ಆಗಸ್ಟ್ ನಲ್ಲಿ ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರದೇಶದಲ್ಲಿ ಮತಾಂಧರು ನಡೆಸಿದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾದ ಗಲಭೆಕೋರರಿಗೆ ಕರ್ನಾಟಕ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ. ಚಾರ್ಜ್‍ಶೀಟ್‍ಅನ್ನು ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಗಲಭೆಕೋರರಿಗೆ ನ್ಯಾಯಾಲಯವು ಜಾಮೀನು ನೀಡಿತು. ಜೊತೆಗೆ ಚಾರ್ಜ್‍ಶೀಟ್‍ಗಳನ್ನು ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂಬ ಬೇಡಿಕೆಯನ್ನು ನ್ಯಾಯಾಲಯವು ತಿರಸ್ಕರಿಸಿತು. ೧೧೧ ಆರೋಪಿಗಳಲ್ಲಿ ೯೦ ಮಂದಿಗೆ ಈ ಹಿಂದೆ ವಿಶೇಷ ನ್ಯಾಯಾಲಯವು ಜಾಮೀನು ನೀಡಿತ್ತು. ಉಳಿದ ೨೧ ಜನರಿಗೆ ಈಗ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ.

ಮುಹಮ್ಮದ್ ಪೈಗಂಬರನನ್ನು ಸಾಮಾಜಿಕ ಮಾಧ್ಯಮದಿಂದ ಅವಮಾನಿಸಿದ ನೆಪದಲ್ಲಿ ೨೦೨೦ ರ ಆಗಸ್ಟ್ ೧೦ ರ ರಾತ್ರಿ ಇಲ್ಲಿನ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಲಾಗಿತ್ತು. ಅದೇರೀತಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೂ ದಾಳಿ ನಡೆಸಲಾಯಿತು. ಆ ಸಮಯದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರೆ ಇತರ ಮೂವರು ಗಾಯಗೊಂಡಿದ್ದರು.