ಐಎಸ್‌ಐಗೆ ಗೌಪ್ಯ ದಾಖಲೆಗಳನ್ನು ಒದಗಿಸಿದ್ದಕ್ಕಾಗಿ ಭಾರತೀಯ ಸೇನೆಯ ಇಬ್ಬರು ಸೈನಿಕರ ಬಂಧನ

ಇಂತಹ ದೇಶದ್ರೋಹಿಗಳನ್ನು ಗಲ್ಲಿಗೇರಿಸಿ!

ಸಾಂದರ್ಭಿಕ ಚಿತ್ರ

ನವ ದೆಹಲಿ : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತೀಯ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿ ನೀಡಿದ್ದ ಆರೋಪದ ಮೇಲೆ ಪಂಜಾಬ್ ಪೊಲೀಸರು ಸೇನೆಯ ಹರಪ್ರೀತ್ ಸಿಂಗ್ (೨೩) ಮತ್ತು ಗುರ್ಭೇಜ್ ಸಿಂಗ್ (೨೩) ಇವರಿಬ್ಬರನ್ನು ಬಂಧಿಸಿದ್ದಾರೆ. ಸೈನ್ಯದ ಕಾರ್ಯವೈಖರಿ ಮತ್ತು ನಿಯೋಜನೆಗೆ ಸಂಬಂಧಿಸಿದ ಕೆಲವು ಪ್ರಮುಖ ದಾಖಲೆಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಇವರಿಬ್ಬರು ಸುಮಾರು ೯೦೦ ದಾಖಲೆಗಳನ್ನು ಪಾಕಿಸ್ತಾನದ ಮಾದಕ ದ್ರವ್ಯ ಕಳ್ಳಸಾಗಣೆದಾರ ರಣವೀರ್ ಸಿಂಗ್ ಅವರಿಗೆ ಹಸ್ತಾಂತರಿಸಿದ್ದರು. ನಂತರ ದಾಖಲೆಗಳನ್ನು ಐಎಸ್‌ಐಗೆ ಹಸ್ತಾಂತರಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.