ಈ ಛಾಯಾಚಿತ್ರದಲ್ಲಿ ಪರಾತ್ಪರ ಗುರು ಡಾ. ಆಠವಲೆಯವರ ಚರ್ಮ, ಕಣ್ಣುಗಳು ಮತ್ತು ಮುಖದ ಮೇಲಿನ ಭಾವವನ್ನು ನೋಡಿರಿ. ಇವುಗಳಿಂದ ‘ಅವರ ವಯಸ್ಸು ಅಥವಾ ಇತರ ಯಾವುದೇ ವಿಷಯಗಳ ಕುರಿತು ಏನಾದರೂ ವೈಶಿಷ್ಟ್ಯಪೂರ್ಣ ಅಂಶಗಳು ಅರಿವಾಗುವುದೇ ?’, ಎಂಬುದರ ಅಧ್ಯಯನ ಮಾಡಿರಿ. ತಮಗೆ ಅರಿವಾದ ಅಂಶಗಳನ್ನು ಕೆಳಗಿನ ವಿಳಾಸಕ್ಕೆ ಬರೆದು ಕಳುಹಿಸಿ.
ಗಣಕೀಯ ವಿಳಾಸ : [email protected]
ಅಂಚೆ ವಿಳಾಸ : ಸನಾತನ ಆಶ್ರಮ, 24/B, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. 403401
ಪ್ರಯೋಗದವಾದ ನಂತರ ಅದರ ಉತ್ತರವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : https://sanatanprabhat.org/kannada/46599.html |
* ಸೂಕ್ಷ್ಮ : ಪ್ರತ್ಯಕ್ಷ ಕಾಣುವ ಅವಯವಗಳಾದ ಮೂಗು, ಕಿವಿ, ಕಣ್ಣುಗಳು, ನಾಲಿಗೆ ಮತ್ತು ಚರ್ಮ ಇವು ಪಂಚಜ್ಞಾನೇಂದ್ರಿಯಗಳಾಗಿವೆ. ಈ ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿ ಇವುಗಳ ಆಚೆಗಿನ ಎಂದರೆ ಸೂಕ್ಷ್ಮ. ಸಾಧನೆಯಲ್ಲಿ ಪ್ರಗತಿ ಮಾಡಿಕೊಂಡ ಕೆಲವು ವ್ಯಕ್ತಿಗಳಿಗೆ ಈ ಸೂಕ್ಷ್ಮ ಸಂವೇದನೆಯ ಅರಿವಾಗುತ್ತದೆ. ಈ ಸೂಕ್ಷ್ಮ ಜ್ಞಾನದ ಬಗ್ಗೆ ವಿವಿಧ ಧರ್ಮಗ್ರಂಥಗಳಲ್ಲಿ ಉಲ್ಲೇಖವಿದೆ.
* ಸೂಕ್ಷ್ಮ ಪರೀಕ್ಷಣೆ : ಯಾವುದಾದರೊಂದು ಘಟನೆಯ ಬಗ್ಗೆ ಅಥವಾ ಪ್ರಕ್ರಿಯೆಯ ಬಗ್ಗೆ ಚಿತ್ತಕ್ಕೆ (ಅಂತರ್ಮನಸ್ಸಿಗೆ) ಏನು ಅರಿವಾಗುತ್ತದೆಯೋ, ಅದಕ್ಕೆ ‘ಸೂಕ್ಷ್ಮ ಪರೀಕ್ಷಣೆ ಎನ್ನುತ್ತಾರೆ. * ಸೂಕ್ಷ್ಮದಲ್ಲಿ ಕಾಣಿಸುವುದು, ಕೇಳಿಸುವುದು ಇತ್ಯಾದಿ (ಪಂಚಸೂಕ್ಷ್ಮಜ್ಞಾನೇಂದ್ರಿಯಗಳಿಂದ ಜ್ಞಾನಪ್ರಾಪ್ತಿಯಾಗುವುದು) : ಕೆಲವು ಸಾಧಕರ ಅಂತರ್ದೃಷ್ಟಿ ಜಾಗೃತವಾಗುತ್ತದೆ, ಅಂದರೆ ಅವರಿಗೆ ಕಣ್ಣಿಗೆ ಕಾಣಿಸದಿರುವುದು ಕಾಣಿಸುತ್ತದೆ ಮತ್ತು ಇನ್ನು ಕೆಲವರಿಗೆ ಸೂಕ್ಷ್ಮದಲ್ಲಿನ ನಾದ ಅಥವಾ ಶಬ್ದಗಳು ಕೇಳಿಸುತ್ತವೆ.
|