ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ ಎನ್ನುತ್ತಾರೆ.
ಮಹತ್ವ
ದೇವರ ಈ ನಿದ್ರಾಕಾಲದಲ್ಲಿ ಅಸುರರು ಪ್ರಬಲರಾಗುತ್ತಾರೆ ಮತ್ತು ಮಾನವರಿಗೆ ತೊಂದರೆಗಳನ್ನು ಕೊಡುತ್ತಾರೆ. ‘ಅಸುರರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಒಂದಲ್ಲ ಒಂದು ವ್ರತವನ್ನು ಅವಶ್ಯವಾಗಿ ಮಾಡಬೇಕು, ಹೀಗೆ ಧರ್ಮಶಾಸ್ತ್ರವು ಹೇಳುತ್ತದೆ ?
ವಾರ್ಷಿಕಾಂಶ್ಚತುರೋ ಮಾಸಾನ್ ವಾಹಯೇತ್ ಕೇನಚಿನ್ನರಃ|
ವ್ರತೇನ ನ ಚೇದಾಪ್ನೋತಿ ಕಿಲ್ಮಿಷಂ ವತ್ಸರೋದ್ಭವಮ್||
ಅರ್ಥ : ಪ್ರತಿವರ್ಷ ಚಾತುರ್ಮಾಸದಲ್ಲಿ ಮನುಷ್ಯನು ಯಾವುದಾದರೂಂದು ವ್ರತವನ್ನು ಅವಶ್ಯ ಮಾಡಬೇಕು; ಇಲ್ಲದಿದ್ದರೆ ಅವನಿಗೆ ಸಂವತ್ಸರೋದ್ಭವವೆಂಬ ದೋಷ ತಗಲುತ್ತದೆ.