ಜಗತ್ತಿನ ಕಣ್ಣಿಗೆ ಮಣ್ಣೆರಚಲು ಈ ರೀತಿಯ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹವರಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ‘ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಬಹುದು!
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭೋಂಗ ನಗರದ ಶ್ರೀ ಗಣಪತಿ ದೇವಸ್ಥಾನವನ್ನು ಮತಾಂಧರು ಧ್ವಂಸಗೊಳಿಸಿದ್ದರು. ಪ್ರಕರಣದಲ್ಲಿ ಮುಖ್ಯ ಸೂತ್ರಧಾರ ಸೇರಿದಂತೆ ೫೦ ಜನರನ್ನು ಬಂಧಿಸಲಾಗಿದೆ. ಒಟ್ಟು ೧೫೦ ಜನರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
೧. ಘಟನೆಗೆ ಸಂಬಂಧಿಸಿದಂತೆ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜದಾರ್ ಇವರು, ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ದೇವಾಲಯದ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದೆ. (ಪಾಕಿಸ್ತಾನಿ ರಾಜಕಾರಣಿಗಳ ಇಂತಹ ಆಶ್ವಾಸನೆಗಳನ್ನು ಯಾರು ನಂಬುತ್ತಾರೆ ? – ಸಂಪಾದಕ)
೨. ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಇವರ ವಿಶೇಷ ಸಹಾಯಕ ಡಾ. ಶಹಬಾಜ ಗಿಲ ಇವರು ಟ್ವೀಟ್ ಮಾಡುತ್ತಾ, ಈ ಘಟನೆ ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಎಂದು ಹೇಳಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈ ಘಟನೆಯನ್ನು ಗಣನೆಗೆ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಪಾಕಿಸ್ತಾನದ ಸಂವಿಧಾನವು ಅಲ್ಪಸಂಖ್ಯಾತರಿಗೆ ಅವರ ಪೂಜೆ ಮಾಡುವ ಸ್ವಾತಂತ್ರ್ಯ ನೀಡುತ್ತದೆ ಮತ್ತು ಭದ್ರತೆ ನೀಡುತ್ತದೆ ಎಂದು ಹೇಳಿದರು. (ಇದನ್ನು ಹೇಳುವುದರಿಂದ ಮಾತ್ರ ಹಿಂದೂಗಳ ರಕ್ಷಣೆಯಾಗುವುದಿಲ್ಲ, ಕೃತಿಯ ಸ್ತರದಲ್ಲಿ ಅವರ ರಕ್ಷಣೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಆವಶ್ಯಕವಾಗಿದೆ ! – ಸಂಪಾದಕ)