
ಅಧ್ಯಾತ್ಮದ ಜಿಜ್ಞಾಸುಗಳು, ವಿವಿಧ ಯೋಗ ಮಾರ್ಗಗಳಿಗನುಸಾರ ಸಾಧನೆ ಮಾಡುವ ಸಾಧಕರು ಮತ್ತು ಧರ್ಮಪ್ರೇಮಿಗಳಿಗೆ ಆಧ್ಯಾತ್ಮಿಕ ಪ್ರಗತಿಗಾಗಿ ಮಾರ್ಗದರ್ಶನವಾಗಬೇಕು ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು ಎಂಬುದಕ್ಕಾಗಿ ಸನಾತನವು ಆಚಾರ ಧರ್ಮ, ಧಾರ್ಮಿಕ ಕೃತಿ, ದೇವತೆಗಳು, ಸಾಧನೆ, ರಾಷ್ಟ್ರರಕ್ಷಣೆ, ಧರ್ಮಜಾಗೃತಿ ಮುಂತಾದ ವಿಷಯಗಳ ಬಗ್ಗೆ ಗ್ರಂಥ ಮತ್ತು ಕಿರುಗ್ರಂಥಗಳನ್ನು ಪ್ರಕಾಶಿಸಿದೆ. ಈ ಜ್ಞಾನದಿಂದ ಕೇವಲ ಭಾರತ ಮಾತ್ರವಲ್ಲ ಜಗತ್ತಿನೆಲ್ಲೆಡೆಯ ಮಾನವರಿಗೆ ಲಾಭವಾಗುತ್ತಿದ್ದು ಅವರ ಜೀವನ ಉದ್ಧಾರವಾಗುತ್ತಿದೆ. ಗ್ರಂಥ ನಿರ್ಮಿತಿ ಪ್ರಕ್ರಿಯೆಯು ನಿರಂತರವಾಗಿ ನಡೆಯುತ್ತಿದ್ದು ಜುಲೈ ೨೦೨೧ ರವರೆಗೆ ಸನಾತನದ ೩೩೮ ಗ್ರಂಥಗಳ ೧೭ ಭಾಷೆಗಳಲ್ಲಿ ೮೨,೦೯,೦೦೦ ಪ್ರತಿಗಳನ್ನು ಪ್ರಕಟಿಸಲಾಗಿದ್ದು, ಇನ್ನೂ ೮೦೦೦ ಗ್ರಂಥಗಳನ್ನು ಪ್ರಕಟಿಸುವಷ್ಟು ಜ್ಞಾನ ಸಂಗ್ರಹವಾಗಿದೆ. ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥಸಂಪತ್ತನ್ನು ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಧರ್ಮಕಾರ್ಯದ ಸುವರ್ಣಾವಕಾಶವೇ ಆಗಿದೆ. ಮರಾಠಿ, ಹಿಂದಿ ಅಥವಾ ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆ, ಅದೇ ರೀತಿ ಕನ್ನಡದಿಂದ ಇತರ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಮಲಯಾಳಂ ಮುಂತಾದ ಭಾಷೆಗಳಿಗೆ ಅನುವಾದ ಮಾಡುವ ಸೇವೆ ಲಭ್ಯವಿದೆ.
ಅನುವಾದ ಮಾಡುವವರಿಗೆ ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.
ಸಂಪರ್ಕ ಕ್ರ. : 9342435617
ವಿ-ಅಂಚೆ : [email protected]
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ನಟ ಆಮೀರ್ ಖಾನ್ ‘ಲವ್ ಜಿಹಾದ್’ ನ ‘ಬ್ರ್ಯಾಂಡ್ ಅಂಬಾಸಿಡರ್’ ! – ಸಚಿವ ನಿತೇಶ್ ರಾಣೆ, ಮಹಾರಾಷ್ಟ್ರ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !