ಶ್ರೀ ಗಣೇಶನಿಗೆ ದೂರ್ವೆಯನ್ನು ಏಕೆ ಅರ್ಪಿಸುತ್ತಾರೆ ?

ನಾವು ಪೂಜಿಸುವ ಮೂರ್ತಿಯಲ್ಲಿ ದೇವತ್ವವು ಹೆಚ್ಚಿಗೆ ಬಂದು ನಮಗೆ ಚೈತನ್ಯದ ಲಾಭವಾಗಬೇಕು ಎಂಬುದು ಪೂಜೆಯ ಒಂದು ಉದ್ದೇಶವಾಗಿರುತ್ತದೆ. ಆದುದರಿಂದ ಆಯಾಯ ದೇವತೆಗಳ ತತ್ತ್ವವನ್ನು ಹೆಚ್ಚೆಚ್ಚು ಆಕರ್ಷಿಸುವಂತಹ ವಸ್ತುಗಳನ್ನು ದೇವತೆಗಳಿಗೆ ಅರ್ಪಿಸುವುದು ಸೂಕ್ತವಾಗಿದೆ. ದೂರ್ವೆಯಲ್ಲಿ ಗಣೇಶತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಅತ್ಯಧಿಕ ಇರುವುದರಿಂದ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.

ಶ್ರೀ ಗಣೇಶನಿಗೆ ಅರ್ಪಿಸುವ ದೂರ್ವೆ ಹೇಗೆ ಮತ್ತು ಎಷ್ಟು ಅರ್ಪಿಸಬೇಕು ?

ಗಣಪತಿಗೆ ಎಳೆಯ ದೂರ್ವೆಗಳನ್ನು ಅರ್ಪಿಸಬೇಕು. ದೂರ್ವೆಗಳಿಗೆ ೩, ೫, ೭ ಹೀಗೆ ಬೆಸ ಸಂಖ್ಯೆಯ ಗರಿಗಳಿರಬೇಕು. ದೂರ್ವೆಗಳನ್ನು ಒಟ್ಟಿಗೆ ಕಟ್ಟುವುದರಿಂದ ಅವುಗಳ ಸುಗಂಧವು ಹೆಚ್ಚು ಸಮಯ ಉಳಿಯುತ್ತದೆ. ಅವು ಹೆಚ್ಚು ಸಮಯ ತಾಜಾ ಆಗಿರಬೇಕೆಂದು ಅವುಗಳನ್ನು ನೀರಿನಲ್ಲಿ ಅದ್ದಿ ಅರ್ಪಿಸುತ್ತಾರೆ. ಇವುಗಳಿಂದ ಗಣಪತಿಯ ಪವಿತ್ರಕಗಳು ಹೆಚ್ಚು ಕಾಲ ಮೂರ್ತಿಯಲ್ಲಿ ಉಳಿಯುತ್ತವೆ. ಬೆಸ ಸಂಖ್ಯೆಗಳು ಶಕ್ತಿಗೆ ಸಂಬಂಧಿಸಿರುತ್ತವೆ. ದೂರ್ವೆಗಳನ್ನು ಹೆಚ್ಚಾಗಿ ಬೆಸ ಸಂಖ್ಯೆಗಳಲ್ಲಿ (ಕನಿಷ್ಠ ೩ ಅಥವಾ ೫, ೭, ೨೧ ಇತ್ಯಾದಿ) ಅರ್ಪಿಸುತ್ತಾರೆ. ಬೆಸ ಸಂಖ್ಯೆಗಳಿಂದ ಮೂರ್ತಿ ಯಲ್ಲಿ ಶಕ್ತಿಯು ಹೆಚ್ಚು ಪ್ರಮಾಣದಲ್ಲಿ ಬರುತ್ತದೆ. ಗಣಪತಿಗೆ ವಿಶೇಷವಾಗಿ ೨೧ ದೂರ್ವೆಗಳನ್ನು ಅರ್ಪಿಸುತ್ತಾರೆ. ೨೧ ಈ ಸಂಖ್ಯೆಯು ಸಂಖ್ಯಾ ಶಾಸ್ತ್ರಕ್ಕನುಸಾರ ೨ + ೧=೩ ಹೀಗೆ ಆಗಿದೆ. ಶ್ರೀ ಗಣಪತಿಯು ‘೩ ಈ ಸಂಖ್ಯೆಗೆ ಸಂಬಂಧಿಸಿದ್ದಾನೆ. ‘೩ ಈ ಸಂಖ್ಯೆಯು ಕರ್ತ, ಧರ್ತದೊಂದಿಗೆ ಹರ್ತವೂ ಆಗಿರುವುದರಿಂದ ಈ ಶಕ್ತಿಯಿಂದ ೩೬೦ ಲಹರಿಗಳನ್ನು ನಾಶ ಮಾಡಲು ಸಾಧ್ಯವಾಗುತ್ತದೆ. ಸಮ ಸಂಖ್ಯೆಗಳಲ್ಲಿ ದೂರ್ವೆಗಳನ್ನು ಅರ್ಪಿಸಿದರೆ ೩೬೦ ಲಹರಿಗಳು ಹೆಚ್ಚಿಗೆ ಆಕರ್ಷಿತವಾಗುತ್ತವೆ ಮತ್ತು ನಂತರ ೧೦೮ ಲಹರಿಗಳೂ ಆಕರ್ಷಿತವಾಗುತ್ತವೆ.