೧. ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಇದನ್ನೇ ‘ಆಪದ್ಧರ್ಮ ಎಂದು ಹೇಳುತ್ತಾರೆ. ‘ಆಪದ್ಧರ್ಮ ಅಂದರೆ ‘ಆಪದ್ಧರ್ಮ ಕರ್ತವ್ಯೋ ಧರ್ಮಃ| ಅಂದರೆ ‘ಆಪತ್ಕಾಲದಲ್ಲಿ ಧರ್ಮಶಾಸ್ತ್ರದಲ್ಲಿ ಮಾನ್ಯತೆ ಯಿರುವ ಕೃತಿಗಳು.
೨. ಸದ್ಯ ಕೊರೊನಾ ವೈರಾಣುವಿನ ಹಾವಳಿ ದಿನದಿಂದ ದಿನಕ್ಕೆ ದೊಡ್ಡ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಇದರಿಂದ ಕೆಲವು ಸ್ಥಳಗಳಲ್ಲಿ ಮನೆಯಿಂದ ಹೊರಗೆ ಬರುವುದನ್ನೂ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಪದ್ಧರ್ಮ ಮತ್ತು ಧರ್ಮಶಾಸ್ತ್ರಗಳನ್ನು ಜೊತೆಗೂಡಿಸಿ ದೃಶ್ಯಾವಳಿ, ದುಬಾರಿ ಅಲಂಕಾರ ಇತ್ಯಾದಿಗಳನ್ನು ಮಾಡದೇ ಸರಳವಾಗಿ ಮಣ್ಣಿನ ಸಿದ್ಧಿವಿನಾಯಕನ ವ್ರತವನ್ನು ಮುಂದಿನ ಪದ್ಧತಿಯಿಂದ ಮಾಡಬಹುದು.
೨ ಅ. ಈ ವರ್ಷ ಯಾವ ಪ್ರದೇಶದಲ್ಲಿ ಕೊರೊನಾ ವೈರಾಣುವಿನ ಸೋಂಕು ಅಲ್ಪ ಪ್ರಮಾಣದಲ್ಲಿದೆಯೋ, ಅಂದರೆ ಯಾವ ಭಾಗದಲ್ಲಿ ಸಂಚಾರಸಾರಿಗೆ ನಿಷೇಧವಿಲ್ಲವೋ, ಅಂತಹ ಸ್ಥಳಗಳಲ್ಲಿ ಎಂದಿನಂತೆ ಗಣೇಶಮೂರ್ತಿಯನ್ನು ತಂದು ಅದನ್ನು ಪೂಜಿಸಬೇಕು.
೨ ಅ. ಯಾರಿಗೆ ಕಾರಣಾಂತರಗಳಿಂದ ಮನೆಯಿಂದ ಹೊರಗೆ ಬರುವುದು ಸಾಧ್ಯವಿಲ್ಲವೋ, ಉದಾ. ಕೊರೊನಾದ ಸಾಂಕ್ರಾಮಿಕತೆಯಿಂದ ಅಕ್ಕಪಕ್ಕದ ಪರಿಸರ ಅಥವಾ ಕಟ್ಟಡವನ್ನು ‘ನಿಷೇಧಿತ ವಲಯ ಎಂದು ಘೋಷಿಸಿದ್ದರೆ, ಅಲ್ಲಿಯ ಜನರು ತಮಗೆ ಗಣೇಶತತ್ತ್ವದ ಲಾಭವಾಗಬೇಕೆಂದು ತಮ್ಮ ಮನೆಯಲ್ಲಿರುವ ಗಣೇಶನ ಮೂರ್ತಿ ಅಥವಾ ಗಣೇಶನ ಚಿತ್ರಕ್ಕೆ ಷೋಡಷೋಪಚಾರ ಪೂಜೆಯನ್ನು ಸಲ್ಲಿಸಬೇಕು. ಈ ಪೂಜೆಯನ್ನು ಮಾಡುವಾಗ ಪೂಜೆಯ ಅಂಗವಾದ ‘ಪ್ರಾಣಪ್ರತಿಷ್ಠಾಪನೆ ಈ ವಿಧಿಯನ್ನು ಮಾತ್ರ ಮಾಡಬಾರದು, ಎಂದು ಗಮನದಲ್ಲಿಡಬೇಕು.
೩. ಕೊರೊನಾದ ಸಂಕಟದಿಂದ ಯಾರಿಗೆ ಪ್ರತಿವರ್ಷದಂತೆ ಶಿಲಾ ಸ್ವರೂಪದಲ್ಲಿ ಅಥವಾ ಮುಖವಾಡಗಳ ಸ್ವರೂಪದಲ್ಲಿ ಗೌರಿಯ ಪೂಜೆಯನ್ನು ಮಾಡಲು ಸಾಧ್ಯವಿಲ್ಲವೋ, ಅವರು ತಮ್ಮ ಮನೆಯಲ್ಲಿನ ಯಾವುದಾದರೊಂದು ದೇವಿಯ ಮೂರ್ತಿ ಅಥವಾ ದೇವಿಯ ಚಿತ್ರದ ಪೂಜೆಯನ್ನು ಮಾಡಬೇಕು.
– ಶ್ರೀ. ದಾಮೋದರ ವಝೆ, ಸಂಚಾಲಕರು, ಸನಾತನ ಪುರೋಹಿತ ಪಾಠಶಾಲೆ, ಸನಾತನ ಆಶ್ರಮ, ರಾಮನಾಥಿ, ಗೋವಾ.
ವಿಶೇಷ ಸೂಚನೆ : ಗಣೇಶಮೂರ್ತಿಯನ್ನು ತರುವಾಗ, ಹಾಗೆಯೇ ಮೂರ್ತಿಯ ವಿಸರ್ಜನೆಯನ್ನು ಮಾಡುವಾಗ ಮನೆಯ ಕೆಲವೇ ವ್ಯಕ್ತಿಗಳು ಹೋಗಬೇಕು. ಮೂರ್ತಿಯ ವಿಸರ್ಜನೆ ಮಾಡುವಾಗ ತಮ್ಮ ಮನೆಯ ಹತ್ತಿರದ ಕೆರೆ ಅಥವಾ ಬಾವಿಯಲ್ಲಿ ವಿಸರ್ಜನೆ ಮಾಡಬೇಕು. ಈ ಸಮಯದಲ್ಲಿ ಜನಜಂಗುಳಿಯಾಗುವ ಅಪಾಯ ಹೆಚ್ಚಿರುವುದರಿಂದ ಕೊರೊನಾ ಸಂದರ್ಭದಲ್ಲಿ ಸರಕಾರವು ಹೇಳಿರುವ ಮಾರ್ಗದರ್ಶಕ ಅಂಶಗಳನ್ನು ತಪ್ಪದೇ ಪಾಲಿಸುವುದು ನಮ್ಮೆಲ್ಲರ ಕರ್ತವ್ಯವೇ ಆಗಿದೆ. |