ಭಾರತ ಸರಕಾರವು ನಮ್ಮನ್ನು ಭಾರತಕ್ಕೆ ಕರೆದೊಯ್ಯಬೇಕು ! – ಹಿಂದೂಗಳಿಂದ ಬೇಡಿಕೆ
ಕಾಬುಲ (ಅಫ್ಘಾನಿಸ್ತಾನ) – ಅಫಘಾನಿಸ್ತಾನದಲ್ಲಿ ತಾಲಿಬಾನಿ ಸರಕಾರ ಬಂದಾಗಿನಿಂದ ಅಲ್ಲಿಯ ಜನರ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಿರುವಾಗ ಕಾಬೂಲ್‍ನಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಂದ ನವರಾತ್ರಿ ಉತ್ಸವ ಆಚರಣೆ ಮಾಡಲಾಗುತ್ತಿದೆ ಎಂಬ ಒಂದು ಒಳ್ಳೆಯ ಸುದ್ದಿ ಆಗಿದೆ. ಅಲ್ಲಿಯ ಅಸಮಾಯಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಭಜನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದ ಕೆಲವು ವಿಡಿಯೋಗಳು ಬೆಳಕಿಗೆ ಬಂದಿವೆ.
#Flash–
The members of Hindu community in Afghanistan last night celebrated the ongoing Navratri festival at the ancient Asamai Mandir in #Kabul .
They appealed Govt of India for their early evacuation due to acute economic and social hardships being faced by them.
V @PSCINDIAN pic.twitter.com/VyDnHO3zWT— Ravinder Singh Robin ਰਵਿੰਦਰ ਸਿੰਘ رویندرسنگھ روبن (@rsrobin1) October 12, 2021
ಅಸಮಾಯಿ ದೇವಸ್ಥಾನದ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ರಾಮ ಶರಣ ಸಿಂಹ ಇವರು, ನವರಾತ್ರಿಯ ನಿಮಿತ್ತ ಭಜನೆಯೊಂದಿಗೆ ಮಹಾಪ್ರಸಾದದ ಆಯೋಜನೆ ಮಾಡಲಾಗಿತ್ತು, ಈ ಕಾರ್ಯಕ್ರಮದಲ್ಲಿ ಸುಮಾರು 150 ಜನ ಭಾಗವಹಿಸಿದ್ದರು. ಈ ಹಿಂದೂಗಳು ಭಾರತ ಸರಕಾರದ ಬಳಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ ಅಪಘಾನಿಸ್ತಾನದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದಿರುವುದರಿಂದ ಅಲ್ಲಿಯ ನಾಗರಿಕರು ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತಿದೆ.