ಧನ್ವಂತರಿ ಜಯಂತಿ (ನವೆಂಬರ್ ೨)

ಆಯುರ್ವೇದದ ದೃಷ್ಟಿಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರತಿದಿನ ಬೇವಿನ ಐದಾರು ಎಲೆಗಳನ್ನು ತಿಂದರೆ ರೋಗಗಳು ಬರುವ ಸಂಭವವೇ ಕಡಿಮೆಯಾಗುತ್ತದೆ. ಬೇವಿಗೆ ಇಷ್ಟೊಂದು ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.