ವ್ಯಾಟಿಕನ್‍ನಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

( ಎಡದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ )

ವ್ಯಾಟಿಕನ್ ಸಿಟಿ (ಇಟಲಿ) – ಪ್ರಧಾನಿ ಮೋದಿಯವರು ಇಲ್ಲಿನ ಕ್ರೈಸ್ತರ ಕ್ಯಾಥೋಲಿಕ್ ಚರ್ಚ್‍ನ ಸರ್ವೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೊವಾಲ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕತ ಉಪಸ್ಥಿತರಿದ್ದರು. ‘ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಪ್ರೇಮಮಯ ಭೇಟಿಯಾಯಿತು. ನನಗೆ ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ಸಿಕ್ಕಿತು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದೆ’, ಎಂದು ಪೋಪ್ ಫ್ರಾನ್ಸಿಸ್ ಅವರೊಂದಿಗಿನ ತಮ್ಮ ಭೇಟಿಯ ನಂತರ ಮೋದಿ ಹೇಳಿದರು. ಭೇಟಿಯ ಮುನ್ನ ಪ್ರಧಾನಿ ಮೋದಿ ಇಟಲಿ ಪ್ರಧಾನಿ ಮಾರಿಯೋ ದ್ರಾಗಿ ಅವರನ್ನು ಭೇಟಿ ಮಾಡಿದ್ದರು. ಇಬ್ಬರು ಪ್ರಧಾನ ಮಂತ್ರಿಗಳ ನಡುವೆ ನಿಯೋಗ ಮಟ್ಟದಲ್ಲಿ ಚರ್ಚೆಗಳು ನಡೆದವು.