೧. ತಿಥಿ : ಈ ವಿಧಿಯನ್ನು ಕಾರ್ತಿಕ ಶುಕ್ಲ ದ್ವಾದಶಿಯಿಂದ ಹುಣ್ಣಿಮೆಯ ವರೆಗಿನ ಯಾವುದಾದರೊಂದು ದಿನ ಮಾಡುತ್ತಾರೆ.
೨. ಪೂಜೆ : ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ. ಪ್ರಾಚೀನ ಕಾಲದಲ್ಲಿ ಬಾಲ್ಯವಿವಾಹದ ಪದ್ಧತಿಯಿತ್ತು. ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡು ಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇಕಾಯಿ ಮತ್ತು ನೆಲ್ಲಿಕಾಯಿಗಳನ್ನು ಇಡುತ್ತಾರೆ. ಈ ವಿವಾಹದ ವಿಧಿಯನ್ನು ಸಾಯಂಕಾಲ ಮಾಡುತ್ತಾರೆ (ತುಳಸಿಯ ಬಗೆಗಿನ ಮಾಹಿತಿಯನ್ನು ಸನಾತನದ ಗ್ರಂಥ ‘ಶ್ರೀವಿಷ್ಣು, ಶ್ರೀರಾಮ ಮತ್ತು ಶ್ರೀಕೃಷ್ಣ ಇದರಲ್ಲಿ ನೀಡಲಾಗಿದೆ.)
೩. ವೈಶಿಷ್ಟ್ಯ : ತುಳಸಿ ವಿವಾಹದ ಬಳಿಕ ಚಾತುರ್ಮಾಸದಲ್ಲಿ ಕೈಗೊಂಡ ಎಲ್ಲ ವ್ರತಗಳನ್ನು ಸಮಾಪ್ತಗೊಳಿಸುತ್ತಾರೆ. ಚಾತುರ್ಮಾಸದಲ್ಲಿ ವರ್ಜ್ಯ ಮಾಡಿದ ಪದಾರ್ಥಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ ನಂತರ ತಾವೂ ಸೇವಿಸುತ್ತಾರೆ.
(ಆಧಾರ : ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ’)