ತೀರ್ಥಹಳ್ಳಿಯಲ್ಲಿ ಅಕ್ರಮ ಗೋಸಾಗಾಟದ ವಾಹನವನ್ನು ಗೋರಕ್ಷಕರ ಮೇಲೆ ಹಾಯಿಸಿದ ಪ್ರಕರಣ
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗಲೂ ಇಂತಹ ಪ್ರಕರಣಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! ಈ ಕಾನೂನಿನಂತೆ ಕ್ರಮ ಕೈಗೊಳ್ಳದಿರುವ ಆಡಳಿತಾಧಿಕಾರಿ ಮತ್ತು ಪೊಲೀಸರನ್ನೆ ಸರಕಾರ ಜೀವಾವಧಿ ಸೆರೆಮನೆಯಲ್ಲಿಡಬೇಕು !- ಸಂಪಾದಕರು
ಉಡುಪಿ : ಗೋರಕ್ಷಕರ ಮೇಲಿನ ಹಲ್ಲೆ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಸವಾಲೆಸೆಯುವ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತಂದರೂ ಪ್ರಯೋಜನವಿಲ್ಲದಂತಾಗಿದ್ದು, ಕಾನೂನಿನ ಪರಿಣಾಮಕಾರಿ ಅನುಷ್ಠಾನವಾಗಬೇಕು. ಸರಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಒತ್ತಾಯಿಸಿದ್ದಾರೆ. ಅವರು ತೀರ್ಥಹಳ್ಳಿಯ ಬೆಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ವಾಹನ ಚಲಾಯಿಸಿದ ದುಷ್ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸ್ವಾಮೀಜಿಯವರು ಮುಂದೆ ಮಾತನಾಡುತ್ತಾ, ಇತ್ತೀಚೆಗೆ ಗೋಹತ್ಯೆ, ಗೋಸಾಗಾಟ ಸರಾಗವಾಗಿ ನಡೆಯುತ್ತಿರುವುದು ತೀರಾ ಆತಂಕಕಾರಿ. ಗೋವಿನ ಸಂಕುಲ ಉಳಿಸಲು ಸಮಾಜ ಕಟಿಬದ್ಧರಾಗಬೇಕು. ಬೀಡಾಡಿ ದನಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು. ಬೆಜ್ಜವಳ್ಳಿ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ಎಂದು ತಿಳಿಸಿದ್ದಾರೆ.