ಗಣರಾಜ್ಯೋತ್ಸವದಂದು ಉಗ್ರರ ದಾಳಿ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿಯವರ ಜೀವಕ್ಕೆ ಅಪಾಯ

೭೩ನೇ ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸಬೇಕಾಗಿ ಬಂದಿರುವುದು ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಗೇಡಿನ ಸಂಗತಿ !

ದೆಹಲಿ : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸಲಾಗಿದೆ ಎಂಬ ಮಾಹಿತಿಯು ಗುಪ್ತಚರ ಸಂಸ್ಥೆಗಳಿಗೆ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

‘ಇಂಡಿಯಾ ಟುಡೆ’ಈ ಸುದ್ದಿ ಜಾಲತಾಣವು ಗುಪ್ತಚರ ಇಲಾಖೆಯು ನೀಡಿದ ೯ ಪುಟಗಳ ವರದಿಯ ಹಿನ್ನೆಲೆಯಲ್ಲಿ ಈ ಸುದ್ದಿಯನ್ನು ನೀಡಿದೆ. ಭಾರತದ ೭೩ ನೇ ಗಣರಾಜ್ಯೋತ್ಸವವನ್ನು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಾಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ದೇಶಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.