ಚುನಾವಣಾ ಸಮಯದಲ್ಲಿ ಮತದಾರರಿಗೆ ವಸ್ತುಗಳನ್ನು ಉಚಿತವಾಗಿ ನೀಡುವ ಆಶ್ವಾಸನೆಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಸರ್ವೋಚ್ಚ ನ್ಯಾಯಾಲಯದಿಂದ ಕೇಂದ್ರ ಸರಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ !

ಇಂತಹ ಅರ್ಜಿಯನ್ನು ಏಕೆ ಸಲ್ಲಿಸಬೇಕಾಗುತ್ತದೆ ? ಈ ಬಗ್ಗೆ ಚುನಾವಣಾ ಆಯೋಗ ತಾನಾಗಿ ಗಮನಹರಿಸಿ ಸಂಬಂಧಪಟ್ಟವರ ವಿರುದ್ಧ ಏಕೆ ಕ್ರಮಕೈಗೊಳ್ಳುತ್ತಿಲ್ಲ ?

ನವ ದೆಹಲಿ : ರಾಜಕೀಯ ಪಕ್ಷಗಳು ಚುನಾವಣಾ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡಿ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಅನೇಕ ವಸ್ತುಗಳನ್ನು ನೀಡುವುದಾಗಿ ಆಶ್ವಾಸನೆ ನೀಡುತ್ತಿವೆ. ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಕೇಂದ್ರ ಸರಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಉತ್ತರ ಕೋರಿ ನೋಟಿಸ್ ಕಳುಹಿಸಿದೆ. ಈ ಅರ್ಜಿಯಲ್ಲಿ ಇಂತಹ ರಾಜಕೀಯ ಪಕ್ಷಗಳ ನೋಂದಣಿ ರದ್ದುಪಡಿಸಬೇಕು ಹಾಗೂ ಅವುಗಳಿಗೆ ನೀಡಿರುವ ಚುನಾವಣಾ ಚಿಹ್ನೆಯನ್ನು ರದ್ದುಗೊಳಿಸಬೇಕು ಎಂದು ತಿಳಿಸಲಾಗಿದೆ.