ಶ್ರೀ ಪುರಂದರ ದಾಸರ ಪುಣ್ಯತಿಥಿ (ಫೆಬ್ರವರಿ ೧) ನಿಮಿತ್ತ…
ಶ್ರೀ ಪುರಂದರ ದಾಸರು ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರು, ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು, ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು. ಅವರ ಮಗ ಮಧ್ವಪತಿ ದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.