ಕಾಶ್ಮೀರದ ಸಮಸ್ಯೆ ಬಗೆ ಹರಿಯುವವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧದ ಭೀತಿ ! – ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್

ಕಾಶ್ಮಿರ ಸಮಸ್ಯೆಯನ್ನು ಸೃಷ್ಟಿಸಿದ್ದು ಭಾರತವಲ್ಲ, ಅದನ್ನು ಪಾಕಿಸ್ತಾನ ನಿರ್ಮಾಣ ಮಾಡಿದೆ. ಅದು ಕಾಶ್ಮೀರದ ಮೇಲಿನ ದಾವೆಯನ್ನು ಕೈಬಿಟ್ಟು ಅಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಿಂದಿರುಗಿಸಬೇಕು !

ಇಸ್ಲಾಮಾಬಾದ (ಪಾಕಿಸ್ತಾನ) – ಕಾಶ್ಮೀರದ ಸಮಸ್ಯೆ ಬಗೆ ಹರಿಯುವವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧದ ಭೀತಿ ಮುಂದುವರಿಯುತ್ತದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಪಾಕಿಸ್ತಾನದ ‘ಜಿಯೋ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ್ದೇನೆ ಎಂದು ಇಮ್ರಾನ್ ಖಾನ್ ಹೇಳಿಕೊಂಡಿದ್ದಾರೆ.
ಇಮ್ರಾನ್ ಖಾನ್, ನಾನು ಪಾಕಿಸ್ತಾನದಲ್ಲಿ ಅಧಿಕಾರಕ್ಕೆ ಬಂದಾಗ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾಶ್ಮೀರ ಸಮಸ್ಯೆ ಕುರಿತು ಚಿರ್ಚಿಸಿದ್ದೆ. ನಾನು ಅವರಿಗೆ ಹೇಳಿದೆ, ನೀವು ಒಂದು ಹೆಜ್ಜೆ ಮುಂದಿಟ್ಟರೆ, ನಾನು ಎರಡು ಹೆಜ್ಜೆ ಮುಂದೆ ಇಡುತ್ತೇನೆ.(ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆಯನ್ನು ಪಾಕಿಸ್ತಾನ ಏಕೆ ನಿಲ್ಲಿಸುತ್ತಿಲ್ಲ ?, ಇಮ್ರಾನ್ ಖಾನ್ ಅದರ ಬಗ್ಗೆ ಏಕೆ ಮಾತನಾಡುತ್ತಿಲ್ಲ ? – ಸಂಪಾದಕರು)