ದೇಶದ ೭೭೫ ಜಿಲ್ಲೆಗಳ ಪೈಕಿ ೧೦೨ ಜಿಲ್ಲೆಗಳಲ್ಲಿ ಹಿಂದೂ ಅಲ್ಪಸಂಖ್ಯಾತರು !

ಹಿಂದೂಗಳನ್ನು ಜಿಲ್ಲಾವಾರು ಅಲ್ಪಸಂಖ್ಯಾತರೆಂದು ಘೋಷಿಸಿದರೆ, ಅವರು ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆಯಬಹುದು !

ಇದೊಂದು ಎಚ್ಚರಿಕೆ ಗಂಟೆಯಾಗಿದ್ದು, ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳುವುದು ಅಗತ್ಯ !

ನವದೆಹಲಿ : ಎಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ ಅಲ್ಲಿ ರಾಜ್ಯ ಸರಕಾರ ಅವರನ್ನು ಅಲ್ಪಸಂಖ್ಯಾತರೆಂದು ಘೋಷಿಸಬಹುದು ಎಂದು ಕೇಂದ್ರ ಸರಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಲ್ಲಾವಾರು ಜನಸಂಖ್ಯೆಯನ್ನು ಗಮನಿಸಿದರೆ ದೇಶದ ೧೦೨ ಜಿಲ್ಲೆಗಳಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಪ್ರಸ್ತುತ ದೇಶದಲ್ಲಿ ೭೭೫ ಜಿಲ್ಲೆಗಳಿವೆ. ಈ ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸಿದರೆ, ಹಿಂದೂಗಳು ಅಲ್ಪಸಂಖ್ಯಾತರ ಲಾಭವನ್ನು ಪಡೆಯಬಹುದು.