ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಧಾರ್ಮಿಕ ದ್ವೇಷ ಹರಡಿದ ಆರೋಪದಡಿ ಪ್ರಕರಣ ದಾಖಲು

ಭೋಪಾಲ್ : ಧಾರ್ಮಿಕ ವೈಷಮ್ಯ ಹರಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯಪ್ರದೇಶದ ಖರಗೋನ್ ಮತ್ತು ಬರವಾನಿ ಜಿಲ್ಲೆಗಳಲ್ಲಿ ರಾಮನವಮಿ ಶೋಭಾಯಾತ್ರೆಯ ಮೇಲೆ ಕಲ್ಲು ತೂರಾಟ ನಡೆದಿದೆ.

ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಖರಗೋನ್‌ನಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸ್ಥಳದಲ್ಲಿ ಯುವಕನೊಬ್ಬ ಕೇಸರಿ ಧ್ವಜವನ್ನು ಹಾರಿಸುತ್ತಿರುವ ಛಾಯಾಚಿತ್ರವನ್ನು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದಾದ ನಂತರ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ದಿಗ್ವಿಜಯ್ ಸಿಂಗ್ ಧಾರ್ಮಿಕ ಉನ್ಮಾದವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ.

ದಿಗ್ವಿಜಯ್ ಸಿಂಗ್ ಬಳಸಿರುವ ಛಾಯಾಚಿತ್ರ ಮಧ್ಯಪ್ರದೇಶದ್ದಲ್ಲ ಎಂದು ಹೇಳಿದ್ದರು. ನಂತರ ದಿಗ್ವಿಜಯ್ ಸಿಂಗ್ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಈ ಪ್ರಕರಣದ ಕುರಿತು ಭಾಜಪ ಕಾರ್ಯಕರ್ತರು ಭೋಪಾಲ ಅಪರಾಧ ವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.