ಬಂಗಾಳ : ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂತು ಬಿಜೆಪಿ ಕಾರ್ಯಕರ್ತನ ಮೃತದೇಹ!

ತೃಣಮೂಲ ಕಾಂಗ್ರೆಸ ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪ

ಕಳೆದ ಕೆಲವು ವರ್ಷಗಳಿಂದ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕೇಂದ್ರ ಸರಕಾರ ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಏಕೆ ಜಾರಿಗೊಳಿಸುತ್ತಿಲ್ಲ?

ಬಿರಭೂಮ (ಬಂಗಾಳ) – ಇಲ್ಲಿ ಬಿಜೆಪಿಯ ಕಾರ್ಯಕರ್ತನೊಬ್ಬನ ಮೃತದೇಹ ಮರದಲ್ಲಿ ನೇತು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಕಾರ್ಯಕರ್ತನ ಹತ್ಯೆ ಮಾಡಲಾಗಿದ್ದು ಇದರ ಹಿಂದೆ ತೃಣಮೂಲ ಕಾಂಗ್ರೆಸನವರ ಕೈವಾಡವಿದೆ ಎಂದು ಆರೋಪ ಮಾಡಲಾಗಿದೆ. `ಈ ಕಾರ್ಯಕರ್ತನನ್ನು ಹತ್ಯೆ ಮಾಡಿ ಮರಕ್ಕೆ ನೇತು ಹಾಕಲಾಗಿದೆ’ ಎಂದು ಕೆಲವು ಗ್ರಾಮಸ್ಥರು ಹೇಳಿದ್ದಾರೆ. ಮೃತನ ಹೆಸರು ಪೂರ್ಣಚಂದ್ರ ನಾಗ ಆಗಿದ್ದು ಕೂಲಿ ಕಾರ್ಮಿಕನಾಗಿದ್ದನು. ಅವನು ಬಿಜೆಪಿಯ ಸದಸ್ಯತ್ವ ಪಡೆದಿದ್ದರೂ ಸಕ್ರಿಯ ಕಾರ್ಯಕರ್ತನಾಗಿರಲಿಲ್ಲ.