ಅಲವರನಲ್ಲಿ ಶಿವನ ಮಂದಿರ ಕೆಡವಿದ ವಿರುದ್ಧ ಬಿಜೆಪಿ ನಡೆಸಿದ ಪಾದಯಾತ್ರೆಯಲ್ಲಿ ಸಾಧು-ಸಂತರು ಭಾಗಿ !

ಅಲವರ (ರಾಜಸ್ಥಾನ) – ರಸ್ತೆ ಅಗಲಿಕರಣದ ನೆಪದಲ್ಲಿ ರಾಜಗಡದ ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಸ್ಥಾನ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿಗೆ ‘ಪ್ರತಿಭಟನಾ ಮೆರವಣಿಗೆ’ ನಡೆಸಿತು.

ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸನ್ಯಾಸಿಗಳು ಮತ್ತು ಸಂತರು ಭಾಗವಹಿಸಿದ್ದರು.

ಈ ವೇಳೆ ರಾಜ್ಯಪಾಲರ ಹೆಸರಲ್ಲಿ ಜಿಲ್ಲಾಧಿಕಾರಿಗೂ ಮನವಿ ನೀಡಲಾಯಿತು. ಈ ಕ್ರಮದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಲಾಗಿದೆ.

(ಈ ಚಿತ್ರ ಹಾಗು ವಿಡಿಯೋ ಹಾಕುವ ಉದ್ದೇಶ ಯಾರ ಭಾವನೆಗಳಿಗೆ ನೋವನ್ನು ಉಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು)