ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ !

ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ ರಾಜಕೀಯ ಅಸ್ಥಿರತೆ ನಿರ್ಮಾಣ ಆಗಿದ್ದರಿಂದ ಪರಿಸ್ಥಿತಿ ದಿವಾಳಿಯತ್ತ ಸಾಗುತ್ತಿದೆ. ಅಧ್ಯಕ್ಷ ಗೋಟಾಬಾಯಾ ರಾಜಪಕ್ಷೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಷೆ ರಾಜೀನಾಮೆಗೆ ವಿರೋಧ ಪಕ್ಷದ ನಾಯಕರು ಈಗಾಗಲೇ ಒತ್ತಾಯಿಸಿದ್ದಾರೆ. ಇದೀಗ ಅಧ್ಯಕ್ಷ ಗೋಟಬಾಯಾ ರಾಜಪಕ್ಷೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ದೇಶದಲ್ಲಿ ಹದಗೆಡುತ್ತಿರುವ ಪರಿಸ್ಥಿತಿ ಮತ್ತು ರಾಜಕೀಯ ಅಸ್ಥಿರತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಶ್ರೀಲಂಕಾದ ಸಾಮಾನ್ಯ ಜನರು ಆರ್ಥಿಕ ಬಿಕ್ಕಟ್ಟಿಗೆ ರಾಜಪಕ್ಷೆ ಕುಟುಂಬವನ್ನು ದೂಷಿಸಿದ್ದಾರೆ. ರಾಜಪಕ್ಷೆಯ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ. ಶ್ರೀಲಂಕಾದ ಪ್ರಧಾನಿ, ರಾಷ್ಟ್ರಪತಿ, ರಕ್ಷಣಾ ಸಚಿವರು, ಹಣಕಾಸು ಸಚಿವರು ಮತ್ತು ಕ್ರೀಡಾ ಸಚಿವರು ಒಂದೇ ಕುಟುಂಬದವರಾಗಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಆಂದೋಲನದ ಒತ್ತಡದಿಂದಾಗಿ ಮಹಿಂದಾ ರಾಜಪಕ್ಷೆ ಅವರು ಹಣಕಾಸು ಸಚಿವ ಬಸಿಲ್ ರಾಜಪಕ್ಷೆ ಅವರನ್ನು ವಜಾಗೊಳಿಸಿದ್ದಾರೆ.