ಮಂಗಳೂರು ವಿಶ್ವವಿದ್ಯಾಲಯದಲ್ಲಿ ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಗಳ ಕಾನೂನು ದ್ರೋಹಿ ಆಗ್ರಹ

(ಹಿಜಾಬ್ ಎಂದರೆ ತಲೆ ಮತ್ತು ಕುತ್ತಿಗೆಯನ್ನು ಮುಚ್ಚುವ ಬಟ್ಟೆ)

ಮಂಗಳೂರು – ಇಲ್ಲಿನ ಮಂಗಳೂರು ವಿಶ್ವವಿದ್ಯಾಲಯದ ಮುಸ್ಲಿಂ ವಿದ್ಯಾರ್ಥಿನಿಗಳು ಹಿಜಾಬ್ ಧರಿಸಿ ತರಗತಿಗೆ ಬರುವಂತೆ ಒತ್ತಾಯಿಸಿದ್ದಾರೆ. ಅವರ ಪ್ರಕಾರ, ‘ಹಿಜಾಬ್ ನಮ್ಮ ಸಮವಸ್ತ್ರದ ಒಂದು ಭಾಗವಾಗಿದೆ.’ ಎಂದು ಹೇಳಿದರು. ಇದನ್ನು ಹಿಂದೂ ವಿದ್ಯಾರ್ಥಿಗಳು ವಿರೋಧಿಸಿದ್ದಾರೆ.

೧. ಕರ್ನಾಟಕ ಹೈಕೋರ್ಟ್ ಈ ಹಿಂದೆ ಹಿಜಾಬ್ ಇಸ್ಲಾಂನಲ್ಲಿ ಧಾರ್ಮಿಕ ಆಚರಣೆಯಲ್ಲ ಎಂದು ಹೇಳುತ್ತಾ ಹಿಜಾಬ್ ಅನ್ನು ಅನುಮತಿಸಲು ನಿರಾಕರಿಸಿತ್ತು. ಆದರೂ ಮುಸ್ಲಿಂ ವಿದ್ಯಾರ್ಥಿನಿಗಳು ಈ ನಿರ್ಧಾರವನ್ನು ಒಪ್ಪುವುದಿಲ್ಲ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ವು ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸಿತು. ‘೪೪ ವಿದ್ಯಾರ್ಥಿನಿಗಳು ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದಾರೆ’, ಎಂದು ಸಂಘಟನೆಯು ಹೇಳಿಕೊಂಡಿದೆ. ‘ಮುಸ್ಲಿಂ ವಿದ್ಯಾರ್ಥಿನಿಗಳು ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ನಾವೂ ಕೇಸರಿ ವಸ್ತ್ರ ಧರಿಸಿ ಬರುವೆವು’ ಎಂದೂ ಹೇಳಿದೆ.

೨. ವಿಶ್ವವಿದ್ಯಾಲಯವು ಮೇ ೨೬ ರಂದು ಆದೇಶವೊಂದನ್ನು ಹೊರಡಿಸಿ ವಿಶ್ವವಿದ್ಯಾಲಯದ ಪರಿಸರದಲ್ಲಿ ಧಾರ್ಮಿಕ ಉಡುಗೆ ತೊಟ್ಟ ಯಾರಿಗೂ ಪ್ರವೇಶವಿಲ್ಲ ಎಂದು ಹೇಳಿದೆ. ಮುಸ್ಲಿಮ್ ವಿದ್ಯಾರ್ಥಿನಿಗಳು ಕೂಡ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೇಳಿದೆ. ಈ ಕುರಿತು ಉಪಕುಲಪತಿ ಹಾಗೂ ಜಿಲ್ಲಾಧಿಕಾರಿ ಜತೆಯೂ ಚರ್ಚಿಸಿದ್ದಾರೆ ಎಂದು ಹೇಳಿದೆ.

ಸಂಪಾದಕೀಯ ನಿಲುವು

ಕರ್ನಾಟಕ ಹೈಕೋರ್ಟ್ ಹಿಜಾಬ್ ಧರಿಸಲು ಅನುಮತಿ ನೀಡದಿರುವಾಗ ಇಂತಹ ಬೇಡಿಕೆಯನ್ನು ಮುಂದಿಡುವ ಮೂಲಕ ನ್ಯಾಯಾಲಯದ ಆದೇಶವನ್ನು ಕಡೆಗಣಿಸಲಾಗುತ್ತಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !