ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಮನಿರ್ದೇಶನ

ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು – ಕೇಂದ್ರ ಸರಕಾರವು  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಡಾ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ರುಡ್ ಸೆಟ್, ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಶೈಕ್ಷಣಿಕ ಕ್ಷೇತ್ರದಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಪ್ರೇರಣೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರ ಈ ಕಾರ್ಯಕ್ಕೆ ಸಂದ ಗೌರವ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ. ವೀರೇಂದ್ರ ಹೆಗ್ಗಡೆಯವರು ‘ಇದು ಧರ್ಮಸ್ಥಳಕ್ಕೆ, ತನಗೆ ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ. ನಮ್ಮಿಂದ ಸಮಾಜಕ್ಕೆ ಏನೆಲ್ಲಾ ಆಗುತ್ತದೋ ಅದೆಲ್ಲಾ ಸೇವೆಯನ್ನು ಮಾಡುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದಿದ್ದಾರೆ.