ಬಲೂಚಿಸ್ತಾನದಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜ ಮಾರಾಟ ಮಳಿಗೆ ಮೇಲೆ ಗ್ರನೇಡ್ ದಾಳಿ : ಓರ್ವನ ಸಾವು

ಪಾಕಿಸ್ತಾನದ ರಾಷ್ಟ್ರೀಯ ಧ್ವಜ

ಕ್ವೆಟಾ (ಪಾಕಿಸ್ತಾನ) – ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪಾಕಿಸ್ತಾನದ ರಾಷ್ಟ್ರೀಯ ಧ್ವಜ ಮಾರುವ ಒಂದು ಅಂಗಡಿಯ ಮೇಲೆ ಗ್ರನೇಡ್ ಎಸೆಯಲಾಯಿತು. ಇದರಲ್ಲಿ ಒಬ್ಬ ಸಾವನ್ನಪ್ಪಿದ್ದರೆ ೧೪ ಜನರು ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ ಯಾರೂ ಈ ದಾಳಿಯ ಹೊಣೆ ಸ್ವೀಕರಿಸಿಲ್ಲ, ಆದರೆ ಇದರ ಹಿಂದೆ ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಸಂಘಟನೆ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.