
ಭಟಿಂಡಾ (ಪಂಜಾಬ್) – ಹನುಮಾನ್ ಚಾಲೀಸಾ ಪುಸ್ತಕವನ್ನು ಅಪರಿಚಿತ ವ್ಯಕ್ತಿಗಳು ಸುಟ್ಟು ಹಾಕಿದ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆ ತಿಳಿಯುತ್ತಿದ್ದಂತೆಯೇ ಹಿಂದೂಗಳ ಆಕ್ರೋಶ ವ್ಯಕ್ತವಾಯಿತು. ಇದನ್ನು ‘ದೈನಿಕ ಭಾಸ್ಕರ’ ವರದಿ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಗಳ ಮುಖಂಡರಾದ ಸುಖಪಾಲ್ ಸರನ್ ಮತ್ತು ಸಂದೀಪ್ ಅಗ್ರವಾಲ್ ಇವರು, ಕೆಲವರು ಹನುಮಾನ್ ಚಾಲೀಸಾ ಪುಸ್ತಕವನ್ನು ಸುಟ್ಟು ಕಿಲಾ ಸಾಹಿಬ್ ಬಳಿ ಎಸೆದಿರುವ ಮಾಹಿತಿ ನಮಗೆ ಸಿಕ್ಕಿದೆ. ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಅವರು ಹನುಮಾನ್ ಚಾಲೀಸಾ ಪುಸ್ತಕಗಳ ಸುಟ್ಟ ಪುಟಗಳನ್ನು ವಶಪಡಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.’ ಎಂದು ಹೇಳಿದ್ದಾರೆ. ‘ಪಟ್ಟಣದ ವಾತಾವರಣವನ್ನು ಹಾಳು ಮಾಡಲು ಕೆಲವರು ಈ ಕೃತ್ಯವನ್ನು ಮಾಡಿದ್ದಾರೆ. ಈ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು’, ಎಂದು ಭಟಿಂಡಾದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜೆ. ಎಲೆಂಚೆಜಿಯನ್ ಅವರು ಆಶ್ವಾಸನೆಯನ್ನು ನೀಡಿದ್ದಾರೆ.
ಸಂಪಾದಕೀಯ ನಿಲುವುಕಳೆದ ೧-೨ ವರ್ಷಗಳಿಂದ ಪಂಜಾಬ್‌ನಲ್ಲಿ ಹಲವು ಹಿಂದೂ ವಿರೋಧಿ ಚಟುವಟಿಕೆಗಳಲ್ಲಿ ಖಲಿಸ್ತಾನಿ ಭಯೋತ್ಪಾದಕರ ಕೈವಾಡವಿರುವುದು ಬೆಳಕಿಗೆ ಬಂದಿದೆ. ಈಗ ಇಲ್ಲಿ ಆಪ್‌ನ ಸರಕಾರ ಬಂದಾಗಿನಿಂದ ಇಂತಹ ಅಪರಾಧಗಳಲ್ಲಿ ಪ್ರಚಂಡ ಹೆಚ್ಚಳವಾಗುತ್ತಿದೆ. ಆದ್ದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಹತ್ತಿಕ್ಕುವಲ್ಲಿ ಖಲಿಸ್ತಾನಿ ಭಯೋತ್ಪಾದಕರ ಕೈವಾಡವಿದೆಯೇ ಎಂದು ಕೇಂದ್ರ ಸರಕಾರವೇ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !