ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರಿಗೆ ಅನಾಮಧೇಯ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ !

ಮುಂಬಯಿ – ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರಿಗೆ ಅನಾಮಧೇಯ ದೂರವಾಣಿ ಕರೆ ಮೂಲಕ ಜೀವ ಬೆದರಿಕೆಯು ಬಂದಿದೆ. ಸ್ಫೋಟ ಮಾಡಿ ಏಕನಾಥ್ ಶಿಂದೆ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಮಾಹಿತಿಯೂ ಗುಪ್ತಚರ ಇಲಾಖೆಗೆ ಸಿಕ್ಕಿದೆ. ಈ ಪ್ರಕರಣದಲ್ಲಿ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ಪೊಲೀಸರು ಮುಖ್ಯಮಂತ್ರಿಗಳ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕೆಲ ದಿನಗಳ ಹಿಂದೆ ನಕ್ಸಲೀಯರು ಕೂಡ ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಹಾಕಿದ್ದರು. ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಈ ಭಯೋತ್ಪಾದಕ ಸಂಘಟನೆಯ ಮೇಲೆ ಕೇಂದ್ರ ಸರಕಾರ ನಿಷೇಧಿಸಿದ ನಂತರ ಏಕನಾಥ್ ಶಿಂದೆ ಅವರಿಗೆ ಈ ಬೆದರಿಕೆ ಬಂದಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಎಲ್ಲಿಯ ವರೆಗೆ ಭಯೋತ್ಪಾದಕರ ಮತ್ತು ಅವರ ಮೂಲಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಿಲ್ಲವೋ ಅಲ್ಲಿಯವರೆಗೆ ಇದು ಹೇಗೆ ನಡೆಯುತ್ತಲೇ ಇರುವುದು !