ಗೋವುಅನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ !

ನವದೆಹಲಿ – ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಈ ವಿಷಯದ ವಿಚಾರಣೆ ಮಾಡುವುದನ್ನೇ ನಿರಾಕರಿಸಿದೆ. ನ್ಯಾಯಾಲಯವು ‘ಇದರಿಂದ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ? ಇದು ನ್ಯಾಯಾಲಯದ ಕೆಲಸವೇ ? ನಾವು ದಂಡ ವಿಧಿಸುವಂತಾಗುವಂತಹ ಅರ್ಜಿಗಳನ್ನು ಏಕೆ ಸಲ್ಲಿಸಲಾಗುತ್ತಿದೆ ?’ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.