ಧನತ್ರಯೋದಶಿಯ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ-ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ.
ಆಯುರ್ವೇದದ ದೃಷ್ಟಿಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆ ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಬೇವಿಗೆ ತುಂಬ ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.