ಭಯೋತ್ಪಾದನೆಯ ಕರಿ ನೆರಳಿನಲ್ಲಿ ಕ್ರಿಕೆಟ್ ಆಡಲು ಸಾಧ್ಯವಿಲ್ಲ !

ಪಾಕ್‌ಗೆ ಕ್ರೀಡಾ ಸಚಿವ ಅನುರಾಗ್ ಠಾಕೂರರಿಂದ ಪ್ರತ್ಯುತ್ತರ!

ಪಾಕಿಸ್ತಾನದಲ್ಲಿ ನಡೆಯಲಿರುವ ೨೦೨೩ರ ಏಷ್ಯಾ ಕಪ್ ಸ್ಪರ್ಧೆಯಲ್ಲಿ ಭಾಗವಹಿಸದಿರುವ ಭಾರತದ ನಿಲುವು

ಕ್ರೀಡಾ ಸಚಿವ ಅನುರಾಗ್ ಠಾಕೂರ

ನವದೆಹಲಿ: ಏಷ್ಯಾ ಕಪ್‌ಗಾಗಿ ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಹೋಗುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವಾಲಯ ತೆಗೆದುಕೊಳ್ಳಲಿದೆ. ನಾವು ಯಾವಾಗಲೂ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪಂದ್ಯಾವಳಿಗಳಲ್ಲಿ ಪಾಕಿಸ್ತಾನದೊಂದಿಗೆ ಆಡಿದ್ದೇವೆ; ಆದರೆ ದ್ವಿಪಕ್ಷೀಯ ಸ್ಪರ್ಧೆಗಳಲ್ಲಿ ನಮ್ಮ ನೀತಿಯು ಹಿಂದಿನಂತೆಯೇ ಇತ್ತು, ಅದು ಇಂದು ಅದೇ ಆಗಿದೆ. ಭಯೋತ್ಪಾದನೆಯ ಕರಿ ನೆರಳಿನಲ್ಲಿ ಕ್ರಿಕೆಟ್ ಆಡಲು ಸಾಧ್ಯವಿಲ್ಲ. ಏಕೆಂದರೆ ಭಾರತೀಯ ಕ್ರಿಕೆಟ್ ಆಟಗಾರರ ಸುರಕ್ಷತೆ ಮುಖ್ಯವಾಗಿದೆ ಎಂದು ಭಾರತದ ಕ್ರೀಡಾ ಸಚಿವ ಅನುರಾಗ ಠಾಕೂರರು ಹೇಳಿದರು.

ಅವರು ವರದಿಗಾರರೊಂದಿಗೆ ಮಾತನಾಡುತ್ತಿದ್ದರು. ೨೦೨೩ ರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಕಾರ್ಯದರ್ಶಿ ಜಯ ಶಾ ಘೋಷಿಸಿದ್ದರು. ಇದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟೀಕಿಸಿತ್ತು. ಈ ಬಗ್ಗೆ ಠಾಕೂರರಲ್ಲಿ ವಿಚಾರಿಸಿದ ಪ್ರಶ್ನೆಯ ಬಗ್ಗೆ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.