ಮಠದ ಪೀಠಾಧಿಪತಿಯ ಆತ್ಮಹತ್ಯೆ

ಪೀಠಾಧಿಪತಿ ಬಸವಲಿಂಗ ಸ್ವಾಮಿ

ರಾಮನಗರ : ಇಲ್ಲಿನ ಕೆಂಪಾಪುರ ಗ್ರಾಮದ ಶ್ರೀ ಕಂಚುಗಲ್ ಬಂಡೆ ಮಠದ ಪೀಠಾಧಿಪತಿ ಬಸವಲಿಂಗ ಸ್ವಾಮಿ (೪೫ ವರ್ಷ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೋಣೆಯಲ್ಲಿ ಒಂದು ಚೀಟಿ ದೊರಕಿದೆ. ಈ ಬಗ್ಗೆ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

೧. ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಸಂತೋಷ್ ಬಾಬು ಅವರು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ನಾವು ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಆ ನಿಟ್ಟಿನಲ್ಲಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೇಳಿದರು.

೨. ಪೊಲೀಸ್ ಮೂಲಗಳ ಪ್ರಕಾರ, ಕೆಲವು ದುಷ್ಕರ್ಮಿಗಳು ಬಸವಲಿಂಗ ಸ್ವಾಮಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಶಂಕಿಸಲಾಗಿದೆ. ಅವರ ನಿಕಟವರ್ತಿ ಮತ್ತು ಸಂಚಾರವಾಣಿಗಳ ಮೂಲಕ ಅವರನ್ನು ಸಂಪರ್ಕಿಸಿದವರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.