ಪುಲ್ವಾಮಾ ದಾಳಿಯಲ್ಲಿ ೪೦ ಯೋಧರು ಹುತಾತ್ಮರಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಸ್ಲಿಂ ಯುವಕನಿಗೆ ೫ ವರ್ಷ ಜೈಲು ಶಿಕ್ಷೆ

ಬೆಂಗಳೂರು (ಕರ್ನಾಟಕ) : ಇಲ್ಲಿಯ ನ್ಯಾಯಾಲಯವು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಫೈಜ್ ರಾಶೀದ್‌ಗೆ ೫ ವರ್ಷಗಳ ಜೈಲು ಶಿಕ್ಷೆ ಮತ್ತು ೧೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಆತ ಕೆಲವು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ೪೦ ಸೈನಿಕರು ಹುತಾತ್ಮರಾಗಿದ್ದರು ಎಂದು ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡುವ ಮೂಲಕ ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದನು. ನಂತರ ಆತನನ್ನು ಬಂಧಿಸಲಾಯಿತು. ಅಂದಿನಿಂದ ಅವನು ಜೈಲಿನಲ್ಲಿದ್ದಾನೆ.

ಸಂಪಾದಕೀಯ ನಿಲುವು

ಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಕಿಲ್ಲ !