ಹಿಂದೂದ್ವೇಷಿ ‘ವೀರ್ ದಾಸ್’ ವಿವಾದಿತನ ಕಾಮಿಡಿಯನ್ ನ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ ರದ್ದು ಮಾಡಿ !

ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆಯಿಂದ ಬೆಂಗಳೂರಿನ ವೈಯಾಲಿಕವಲ್ ಪೋಲಿಸ್ ಠಾಣೆಯಲ್ಲಿ ದೂರು !

ಬೆಂಗಳೂರು : ಮಲ್ಲೇಶ್ವರಂನ ಚೌಡಯ್ಯ ಮೆಮೊರಿಯಲ್ ಹಾಲ್ ನಲ್ಲಿ ಇದೇ ನವೆಂಬರ್ 10 ರಂದು ಆಯೋಜಿಸಿರುವ ವೀರ್ ದಾಸ್ ನ ಕಾಮಿಡಿ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಮತ್ತು ಶ್ರೀರಾಮ ಸೇನೆಯಿಂದ ವೈಯಾಲಿಕವಲ್ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಲಾಯಿತು. ಪೋಲಿಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಇವರು ಕೂಡಲೇ ಕ್ರಮ ಜರುಗಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ್ ಗೌಡ, ಶ್ರೀರಾಮ‌ಸೇನೆಯ ಬೆಂಗಳೂರು ನಗರ ಅಧ್ಯಕ್ಷ ಶ್ರೀ. ಚಂದ್ರಶೇಖರ್, ಹಿಂದೂ ವಿಧಿಜ್ಞ ಪರಿಷತ್ ನ ಸಂಸ್ಥಾಪಕ ಸದಸ್ಯರಾದ ಪೂ. ಶ್ರೀ. ಸುರೇಶ್ ಕುಲಕರ್ಣಿ ಇವರು ಉಪಸ್ಥಿತದ್ದರು.

ಈ ಸಂದರ್ಭದಲ್ಲಿ ಶ್ರೀ. ಮೋಹ‌ನ ಗೌಡ ಮಾತನಾಡುತ್ತಾ‌,

1. ‘ವೀರ್ ದಾಸ ಎನ್ನುವ ವಿವಾದಿತ ಕಾಮಿಡಿಯನ್ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿಯನ್ನುಂಟು ಮಾಡುತ್ತಾನೆ.

೨. ಬೆಂಗಳೂರಿನ ಮಲ್ಲೇಶ್ವರಂನ ಚೌಡಯ್ಯ ಸ್ಮಾರಕ ಸಭಾಗಂಣದಲ್ಲಿ ಕಾಮಿಡಿ ಶೋವನ್ನು ಆಯೋಜನೆ ಮಾಡಿರುವುದು ಗಮನಕ್ಕೆ ಬಂದಿದೆ.

೩. ಈ ಹಿಂದೆ ಈತ ಅಮೇರಿಕಾದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ಕಾಮಿಡಿ ಮಾಡಿ, ಭಾರತದ ಅವಹೇಳನ ಮಾಡಿದ್ದನು. ಈ ಕಾರಣಕ್ಕಾಗಿ ಮುಂಬಾಯಿ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ಇದೇ ರೀತಿ ವಿದೇಶದಲ್ಲಿ ಭಾರತದ ಪ್ರಧಾನಿ, ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ್ದರು.

೪. ಇಂತಹ ವಿವಾದಿತ ವ್ಯಕ್ತಿ ಬೆಂಗಳೂರಿನಂತಹ ಅತ್ಯಂತ ಕೋಮು ಸೂಕ್ಚ್ಮ ಪ್ರದೇಶದಲ್ಲಿ ಈ ರೀತಿಯ ವಿವಾದಿತ ಕಾರ್ಯಕ್ರಮ ಮಾಡಲು ಅವಕಾಶ ನೀಡುವುದು ಸರಿಯಲ್ಲ. ಈಗಾಗಲೇ ಕರ್ನಾಟಕದಲ್ಲಿ ಕೋಮು ಘಟನೆಗಳ ಪ್ರಕರಣದಿಂದ ಅನೇಕ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಎದುರಿಸುತ್ತಿರುವಾಗ ಪುನಃ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು’ ಎಂದು ಆಗ್ರಹಿಸಿದರು.

ಈತ ಕೆಲವು ದಿನಗಳ ಹಿಂದೆ ಅಮೇರಿಕಾದ ವಾಶಿಂಗ್ಟನ್ ಡಿಸಿಯಲ್ಲಿ ಮಾತನಾಡಿದ ಒಂದು ವಿಡಿಯೋದಲ್ಲಿ ತಾನು ‘ಎಲ್ಲಿ ಮಹಿಳೆಯರನ್ನು ದಿನದಲ್ಲಿ ಪೂಜೆ ಮಾಡಿ, ರಾತ್ರಿ ಅವರ ಮೇಲೆ ಅತ್ಯಾಚಾರ ಮಾಡುವರೋ ಅಂತಹ ಭಾರತದದಿಂದ ಬಂದಿದ್ದೇನೆ. ಮುಂಬಾಯಿ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು.