ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸೇನಾಧಿಕಾರಿಗಳು !
ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯಲು ಭಾರತೀಯ ಸೇನೆಗೆ ಆದೇಶ ನೀಡುವಲ್ಲಿ ಏನು ಸಮಸ್ಯೆ ಇದೆ ಎಂಬುದನ್ನು ಜನರಿಗೆ ತಿಳಿಸಬೇಕು ! ೭೫ ವರ್ಷಗಳಿಂದ ಭಾರತದ ಅವಿಭಾಜ್ಯ ಭಾಗ ಪಾಕಿಸ್ತಾನದಲ್ಲಿರುವುದು ಭಾರತಕ್ಕೆ ಲಜ್ಜಾಸ್ಪದ !
ಶ್ರೀನಗರ (ಜಮ್ಮು-ಕಾಶ್ಮೀರ) – ಯಾವುದೇ ಆದೇಶದ ಮೇಲೆ ಕ್ರಮ ಕೈಗೊಳ್ಳಲು ಸೇನೆಯು ಸಂಪೂರ್ಣ ಸಜ್ಜಾಗಿದೆ. ನಾವು ನಮ್ಮ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೇವೆ. ಆದೇಶ ನೀಡಿದರೆ ನಾವು ಹಿಂತಿರುಗಿ ನೋಡುವುದಿಲ್ಲ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎ.ಡಿ.ಎಸ್. ಔಜ್ಲಾ ಹೇಳಿದ್ದಾರೆ. ಅವರು ಇಲ್ಲಿನ ನಿಗಮದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ಕುರಿತು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಔಜ್ಲಾ ಈ ಹೇಳಿಕೆ ನೀಡಿದ್ದಾರೆ.