‘ಪಾಕಿಸ್ತಾನ ಜಿಂದಾಬಾದ’ ಎಂದು ಘೋಷಣೆ ನೀಡಿದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿನ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲು

ಬೆಂಗಳೂರು (ಕರ್ನಾಟಕ) – ಇಲ್ಲಿಯ ಒಂದು ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿನ ಕಾರ್ಯಕ್ರಮದಲ್ಲಿ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ನೀಡುವ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ಮಹಾವಿದ್ಯಾಲಯದಿಂದ ಅಮಾನತುಗೊಳಿಸಲಾಗಿದೆ.

ಅವರ ಈ ಘೋಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಮಹಾವಿದ್ಯಾಲಯದ ಆಡಳಿತದವರ ಬಳಿ ದೂರು ನೀಡಲಾಗಿತ್ತು. ಅದರ ನಂತರ ಅವರ ಮೇಲೆ ಕ್ರಮ ಕೈಗೊಳ್ಳಲಾಯಿತು. ಹಾಗೂ ಅವರ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ.

(ಸೌಜನ್ಯ : Tv9 Kannada)

ಸಂಪಾದಕೀಯ ನಿಲುವು

ಭಾರತದಲ್ಲಿನ ಇಂತಹ ಪಾಕಿಸ್ತಾನ ಪ್ರೇಮಿಗಳಿಗೆ ಇನ್ನು ಮುಂದೆ ಕಠಿಣ ಶಿಕ್ಷೆ ನೀಡುವ ಕಾನೂನು ಮಾಡುವುದು ಅವಶ್ಯಕ !