ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದಲ್ಲಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆಯಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರ ಥಳಿತ

ಶಿಮ್ಲಾ (ಹಿಮಾಚಲ ಪ್ರದೇಶ) – ಇಲ್ಲಿಯ ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಮತ್ತು ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ `ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್.ಎಫ್.ಐ) ಇವರ ಕಾರ್ಯಕರ್ತರಲ್ಲಿ ವಿವಾದ ನಡೆದು ಅದು ಹೊಡೆದಾಟದಲ್ಲಿ ಕೊನೆಗೊಂಡಿದೆ. ಇದರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ೮ ರಿಂದ ೧೦ ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಹೊಡೆದಾಟದ ಸಮಯದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದರು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪ್ರಸ್ತುತ ಇಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಪಾದಕೀಯ ನಿಲುವು

ಕಮ್ಯುನಿಸ್ಟ್ ರ ಇತಿಹಾಸವು ಹಿಂಸಾಚಾರ ಆಗಿದ್ದರಿಂದ ಅವರಿಂದ ಇದಕ್ಕಿಂತ ಬೇರೆ ಏನು ನಡೆಯಲು ಸಾಧ್ಯ ? ಹಿಮಾಚಲ ಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !