ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿಗಳಿಂದ ಹಿಂದೂ ದೇವಸ್ಥಾನ ಧ್ವಂಸ !

ವಿಕ್ಟೋರಿಯಾ (ಆಸ್ಟ್ರೇಲಿಯಾ) – ಇಲ್ಲಿನ ಕ್ಯಾರಂ ಡೌನ್ಸ್ ಪ್ರದೇಶದಲ್ಲಿ ಖಲಿಸ್ತಾನಿ ಬೆಂಬಲಿಗರು ಶ್ರೀ ಶಿವ ವಿಷ್ಣು ದೇವಸ್ಥಾನವನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಅಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಸಹ ಬರೆದಿದ್ದಾರೆ. ಈ ಬಾರಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳು ಹಿಂದೂಗಳು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇದಕ್ಕೂ ಮುನ್ನ ಜನವರಿ ೧೨ ರಂದು ಮೆಲ್ಬೋರ್ನ್ನನ ಸ್ವಾಮಿನಾರಾಯಣ ದೇವಾಲಯದ ಮೇಲೆ ಖಲಿಸ್ತಾನಿ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು.

‘ವಿಕ್ಟೋರಿಯನ್ ಲಿಬರಲ್ ಪಾರ್ಟಿ’ಯ ಸಂಸದ ಬ್ರಾಡ್ ಬಾಟಿನ್ ಇವರು ಈ ಘಟನೆಯನ್ನು ಖಂಡಿಸಿದ್ದಾರೆ. ನಮ್ಮ ಭವಿಷ್ಯವನ್ನು ದ್ವೇಷದಿಂದ ರೂಪಿಸಲು ಸಾಧ್ಯವಿಲ್ಲ ಅಂತಹ ಘಟನೆಗಳಿಗೆ ಆಸ್ಟ್ರೇಲಿಯಾದಲ್ಲಿ ಸ್ಥಾನವಿಲ್ಲ ಎಂದು ಹೇಳಿದರು.

ಸಂಪಾದಕೀಯ ನಿಲುವು

ಆಸ್ಟ್ರೇಲಿಯಾದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂದ್ವೇಷಿ ಘಟನೆಗಳನ್ನು ನಿಲ್ಲಿಸಲು ಭಾರತ ಸರಕಾರವು ಅಲ್ಲಿನ ಸರಕಾರದ ಮೇಲೆ ಒತ್ತಡ ತರುವ ಅಗತ್ಯವಿದೆ !